K Sudhakar: ದಲಿತ ಕಾರ್ಯಕರ್ತನ ಮನೆಯಲ್ಲಿ ಉಪಾಹಾರ ಸೇವಿಸಿದ ಕೆ ಸುಧಾಕರ್

Arun Kumar
0

ಚಿಕ್ಕಬಳ್ಳಾಪುರ ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿಯವರು ಬಾಬಾ ಸಾಹಬೇರ ಪರಂಪರೆಯನ್ನುಳಿಸಲು ಶ್ರಮಿಸಿದ್ದರೆ, ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಬಾಬಾ ಸಾಹೇಬರನ್ನು ಮೂಲೆಗೆ ಸರಿಸಲು ಸಾಕಷ್ಟು ಪ್ರಯತ್ನ ಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸೂರ್ಯ ಕನ್ವೆನ್ಷನಲ್ ಹಾಲ್ ನಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಶಕ್ತಿ. ದೇಶದಲ್ಲಿ ಸಾವಿರಾರು ಭಾಷೆ, ಬೇರೆ ಬೇರೆ ಜಾತಿ, ಧರ್ಮಗಳಿದ್ದರೂ ಎಲ್ಲರೂ ಅಂಬೇಡ್ಕರ್ ರಚಿತ ಸಂವಿಧಾನದಡಿ ಸಮನ್ವಯದಿಂದ ಜೀವನ ನಡೆಸುತ್ತಿದ್ದಾರೆ. ಸಮ ಸಮಾಜವನ್ನು ನಿರ್ಮಿಸಿದ ಅವರು ಶೋಷಿತರ ಕಣ್ಣೀರು ಒರೆಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದರು ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಡಾ.ಬಿ.ಆರ್.ಅಂಬೇಡ್ಕರರ ಆಶಯದ ಹಾದಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅದರೆ ಕಾಂಗ್ರೆಸ್ ಸರ್ಕಾರ, ಜವಹರಲಾಲ್ ನೆಹರೂ ಹಾಗೂ ಇಂದಿರಾಗಾಂಧಿ ಅವರು ಅಂಬೇಡ್ಕರ್ ಗೆ ಅಪಮಾನ ಮಾಡಿದ್ದರು ಎಂದರು.

ಸ್ವಾತಂತ್ರ್ಯ ದೊರೆತ ಆರಂಭದಿಂದಲೇ, ಡಾ.ಅಂಬೇಡ್ಕರ್ ಅವರನ್ನು ಬದಿಗೆ ಸರಿಸಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸಿತ್ತು. 1952 ರ ಲೋಕಸಭಾ ಚುನಾವಣೆ ಮತ್ತು 1954 ರ ಉಪಚುನಾವಣೆಯಲ್ಲಿ, ಅಂಬೇಡ್ಕರ್ ವಿರುದ್ಧ ಜವಹರಲಾಲ್ ನೆಹರು ನೇತೃತ್ವದಲ್ಲಿ ಪ್ರಚಾರ ಮಾಡಿದ ಕಾಂಗ್ರೆಸ್, ದಾದರ್ನಲ್ಲಿ ಅವರನ್ನು ಸೋಲಿಸಿತು. ನಂತರ, ಭಾರತೀಯ ಜನಸಂಘ ಮತ್ತು ಇತರ ಪಕ್ಷಗಳು ಕೈಜೋಡಿಸಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಮತ್ತೆ ಸಂಸತ್ತಿಗೆ ಕಳುಹಿಸಿದವು ಎಂದು ವಿವರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)