Lok Sabha Election 2024: ನಾಮಪತ್ರ ಸಲ್ಲಿಕೆ ವೇಳೆ ಈ ಅಂಶಗಳು ಗಮನದಲ್ಲಿರಲಿ

Arun Kumar
0

ಬೆಂಗಳೂರು, ಏಪ್ರಿಲ್. 12: ಲೋಕಸಭಾ ಚುನಾವಣೆಗೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಗಿದು, ಅಂತಿಮ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದೇ ವೇಳೆ ಎರಡನೇ ಹಂತದ ಚುನಾವಣೆಗೆ ಪ್ರಕ್ರಿಯೆ ಆರಂಭವಾಗಿದೆ. ಮೇ 7 ರಂದು ಮತದಾನ ಜರುಗಲಿದ್ದು, ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಇದಾದ ಬಳಿಕ ಎರಡನೇ ಹಂತದಲ್ಲಿ ಎಷ್ಟು ಮಂದಿ ಅಭ್ಯರ್ಥಿಗಳು ಇರಲಿದ್ದಾರೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಗಮನಿಸಬೇಕಾದ ಅಂಶಗಳು
ಚುನಾವಣಾಧಿಕಾರಿಗಳ ಕಚೇರಿ (ಜಿಲ್ಲಾಧಿಕಾರಿಗಳ ಕಚೇರಿ) ಸುತ್ತಮುತ್ತಲು 200 ಮೀ. ವ್ಯಾಪ್ತಿಯಲ್ಲಿ ಗಡಿ ಗುರುತಿಸಿ, 100 ಮೀ. ವ್ಯಾಪ್ತಿಯನ್ನು ನಿರ್ಭಂದಿತ ಪ್ರದೇಶವನ್ನಾಗಿ ಗುರುತಿಸಲಾಗಿದೆ. 100 ಮೀ ನಿರ್ಬಂದಿತ ಪ್ರದೇಶದ ವ್ಯಾಪ್ತಿಯೊಳಗಡೆ ನಾಮಪತ್ರ ಸಲ್ಲಿಸಲು ಕೇವಲ 3 ವಾಹನಗಳಿಗೆ ಮಾತ್ರ ಅವಕಾಶವಿದೆ. ಅಭ್ಯರ್ಥಿಯ ವಾಹನಗಳು ಕಡ್ಡಾಯವಾಗಿ ಅನುಮತಿ ಪಡೆದ ವಾಹನಗಳಾಗಿರಬೇಕು ಹಾಗೂ ವಾಹನಗಳ ಮೇಲೆ ಅನುಮತಿ ಪತ್ರವನ್ನು ಲಗತ್ತಿಸಿರಬೇಕು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)