ಧಾರವಾಡ, ಏಪ್ರಿಲ್.06: ಸದ್ಯ ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ಹಲವು ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳಾಗಿ ಘೋಷಿಸಲಾಗಿದೆ. ಧಾರವಾಡ ಜಿಲ್ಲೆ ಕೂಡ ಸಂಪೂರ್ಣ ಬರಪೀಡಿತ ಜಿಲ್ಲೆಯಾಗಿದ್ದು, ಗ್ರಾಮೀಣ ಭಾಗದ ಜನರಿಗೆ, ರೈತರಿಗೆ ಬರಗಾಲದ ಈ ಸಂದರ್ಭದಲ್ಲಿ ನರೇಗಾ ಯೋಜನೆ ಅವರ ಬದುಕಿಗೆ ಆಸರೆ ಆಗಿದೆ.
ಧಾರವಾಡ ಜಿಲ್ಲೆಯಲ್ಲಿ ಕೂಲಿ ಕೇಳಿ ಬರುವ ಎಲ್ಲಿರಿಗೂ ಅವರ ಊರಲ್ಲಿಯೇ ನರೇಗಾ ಯೋಜನೆ ಅಡಿಯಲ್ಲಿ ಉದ್ಯೋಗ ನೀಡಲಾಗುತ್ತಿದ್ದು, ಕಳೆದ ವರ್ಷದ ಗುರಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಿ ಅಧಿಕಾರಿ ಸ್ವರೂಪ ಟಿ.ಕೆ. ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ, ಕೃಷಿಹೊಂಡ, ಕೃಷಿ ಬದು ನಿರ್ಮಾಣದ ಮೂಲಕ ಜಲಸಂರಕ್ಷಣೆ ಹಾಗೂ ರೈತರಿಗೆ ಸಂಪ್ರಾದಾಯಿಕ ಬೆಳೆಗಳ ಬದಲಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಿ, ತೋಟಗಾರಿಕಾ ಬೆಳೆಗಳ ವಿಸ್ತರಣೆಗೆ ಆದ್ಯತೆಯನ್ನು ನೀಡಲಾಗಿದೆ ಎಂದಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.