ನೋಯ್ಡಾ: ಟೊಯೋಟಾ ಫಾರ್ಚುನರ್ ಹಾಗೂ 21 ಲಕ್ಷ ನಗದು ವರದಕ್ಷಿಣೆ ಬೇಡಿಕೆ ಈಡೇರಿಸದ ಕಾರಣ ಮಹಿಳೆಯನ್ನು ಪತಿ ಹಾಗೂ ಆತನ ಕುಟುಂಬಸ್ಥರು ಸೇರಿ ಹೊಡೆದುಕೊಂದಿರುವ ಘಟನೆ ನೋಯ್ಡಾದ ಇಕೋಟೆಕ್ -3 ನ ಖೇಡಾ ಚೌಗನ್ಪುರ ಗ್ರಾಮದಲ್ಲಿ ನಡೆದಿದೆ.
ಕರಿಷ್ಮಾ ಮೃತ ಮಹಿಳೆಯಾಗಿದ್ದಾರೆ. ಮೃತ ಮಹಿಳೆ ತನ್ನ ಪತಿ ವಿಕಾಸ್ ಹಾಗೂ ಅತ್ತೆಯೊಂದಿಗೆ ವಾಸಿಸುತ್ತಿದ್ದರು. ದಂಪತಿಗಳು ಡಿಸೆಂಬರ್ 2022 ರಲ್ಲಿ ವಿವಾಹವಾದರು. ಮದುವೆಯ ವೇಳೆ ವರನ ಕುಟುಂಬಕ್ಕೆ ಎಸ್ ಯು ವಿ ಕಾರು ಮತ್ತು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವರದಕ್ಷಿಣೆಯಾಗಿ ನೀಡಿದ್ದರು.
ಆದರೂ ತೃಪ್ತನಾಗದ ವಿಕಾಸ್ ಕುಟುಂಬವು ಹಲವು ವರ್ಷಗಳಿಂದ ಹೆಚ್ಚಿನ ವರದಕ್ಷಿಣೆಗಾಗಿ ಕರಿಷ್ಮಾ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಲ್ಲೆ ನಡೆಸುತ್ತಿದ್ದರು ಎಂದು ಕರಿಷ್ಮಾಳ ಸಹೋದರ ಆರೋಪಿಸಿದ್ದಾರೆ.
ಮಹಿಳೆಯ ಸಹೋದರ ದೀಪಕ್ ನೀಡಿದ ಮಾಹಿತಿಯ ಪ್ರಕಾರ, ಶುಕ್ರವಾರ ಕರಿಷ್ಮಾ ತನ್ನ ಸಹೋದರನಿಗೆ ಕರೆ ಮಾಡಿ ತನ್ನ ಪತಿ ಹಾಗೂ ಆತನ ಕುಟುಂಬಸ್ಥರು ತನಗೆ ಥಳಿಸಿದ್ದಾರೆ ಎಂದು ತಿಳಿಸಿದ್ದಾಳೆ. ಈ ಮಾಹಿತಿ ಮೇರೆಗೆ ಆಕೆಯ ಮನೆಯವರು ಪತಿ ಮನೆಗೆ ಆಗಮಿಸಿ ಪರಿಶೀಲಿಸಿದಾಗ ಆಕೆ ಮೃತಪಟ್ಟಿದ್ದರು ಎನ್ನಲಾಗಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪತಿ ವಿಕಾಸ್ ಮತ್ತು ಆತನ ತಂದೆ ಸೋಂಪಾಲ್ ಭಾಟಿಯನ್ನು ಬಂಧಿಸಿದ್ದಾರೆ. ಅಲ್ಲದೇ ಆತನ ತಾಯಿ ರಾಕೇಶ್, ಸಹೋದರಿ ರಿಂಕಿ ಮತ್ತು ಸಹೋದರರಾದ ಸುನೀಲ್ ಮತ್ತು ಅನಿಲ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.