ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಎಂಬ ಯುವತಿಯನ್ನ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಎಬಿವಿಪಿ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಂಡ್ಯ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು, ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ವೈಯಕ್ತಿಕ ಕಾರಣದಿಂದ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲವ್ ಜಿಹಾದ್ ಅಲ್ಲ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ವಿರುದ್ಧ ಕಿಡಿಕಾರಿದರು.
ಗೃಹ ಇಲಾಖೆ ವೈಫಲ್ಯ
ಹತ್ಯೆಯಾದ ವಿದ್ಯಾರ್ಥಿನಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿಯಾಗಿದ್ದು, ಅಧಿಕಾರಸ್ಥರ ಮಕ್ಕಳಿಗೆ ಹೀಗಾದರೆ ಇನ್ನು ಸಾಮಾನ್ಯರ ಗತಿ ಏನು, ಇಲ್ಲಿ ಯಾರು ಸುರಕ್ಷಿತವಾಗಿದ್ದಾರೆ ಎಂದು ಪ್ರಶ್ನಿಸಿದರು.
ಫಯಾಜ್ ನಿಜವಾಗಿಯೂ ಪ್ರೀತಿ ಮಾಡುತ್ತಿದ್ದರೆ ಇಂತ ದುಷ್ಕೃತ್ಯಕ್ಕೆ ಕೈಹಾಕುತ್ತಿದ್ದನೆ, ಪ್ರೀತಿ, ಪ್ರೇಮದ ಬಲೆ ಬೀಸಿ ಹಿಂದು ಯುವತಿಯರ ದಾರಿ ತಪ್ಪಿಸುವ ಪ್ರಸಂಗಗಳು ಆಗಾಗ ನಡೆಯುತ್ತವೆ, ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ ಇಂತಹ ಹತ್ಯೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ದುಷ್ಕೃತ್ಯ ಮಾಡಿರುವವರನ್ನು ಎನ್ಕೌಂಟರ್ ಮಾಡುವಂತಹ ಕಾನೂನು ಜಾರಿಗೊಳ್ಳಬೇಕು. ಆರೋಪಿ ಮನೆಯನ್ನು ನೆಲಸಮಗೊಳಿಸಬೇಕು. ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.