ಹಾಸನ, ಏಪ್ರಿಲ್.07: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಇರುವುದು ಕಾಣಿಸುತ್ತಲೇ ಇದೆ. ಒಮದಲ್ಲ ಒಂದು ಕಡೆ ಅದು ವೇದಿಕೆ ಮೇಲೆಯೇ ಬಹಿರಂಗವಾಗುತ್ತಿದೆ. ಗೌಡರ ಕೋಟೆ ಹಾಸನದಲ್ಲಿಯೂ ಪ್ರಜ್ವಲ್ ರೇವಣ್ಣ ಮತ್ತು ಪ್ರೀತಂ ಗೌಡ ನಡುವಿನ ಭಿನ್ನಾಭಿಪ್ರಾಯ ಎಲ್ಲರಿಗೂ ಗೊತ್ತಿರುವುದೆ.
ಆದರೆ, ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ಎರಡು ಪಕ್ಷಗಳ ಕಾರ್ಯಕರ್ತರ ಮೇಲೆ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರದೆ ಇರದು. ಇದೇ ಕಾರಣಕ್ಕೆ ಬಿಜೆಪಿ ಎಚ್ಚೆತ್ತಿಕೊಂಡಿದ್ದು, ಇಬ್ರಬ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಬಿಜೆಪಿ ಹೈಕಮಾಂಡ್ಗೆ ದೂರು ನೀಡಿದ್ದಾರೆ.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಹಾಸನದಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರು ಬಿಜೆಪಿ ಮತ್ತು ಜೆಡಿಎಸ್ನ ತುರ್ತು ಸಮನ್ವಯ ಸಭೆ ನಡೆಸಿದ್ದಾರೆ. ಹೀಗಾಗಿ ಇಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಇವರೇ ಶಮನಗೊಳಿಸುತ್ತಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.