RCB vs KKR: ಕೋಲ್ಕತ್ತಾದಲ್ಲಿ ದಿಗ್ಗಜರ ಸಮಾಗಮ; ಕೊಹ್ಲಿ-ಗಂಭೀರ್ ಮಾತುಕತೆ

Arun Kumar
0

ಭಾನುವಾರ, ಏಪ್ರಿಲ್ 21ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಆರ್ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಶನಿವಾರ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಮೈದಾನದಲ್ಲಿ ಮಾತನಾಡಿದ್ದು ಸಾಕಷ್ಟು ಗಮನ ಸೆಳೆಯಿತು.

2023ರ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು. ಕಳೆದ ವರ್ಷ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗಂಭೀರ್, ಈ ವರ್ಷ ಕೆಕೆಆರ್ ತಂಡಕ್ಕೆ ಮಾರ್ಗದರ್ಶಕರಾಗಿದ್ದಾರೆ.

ಮಾರ್ಚ್ 29 ರಂದು ಬೆಂಗಳೂರಿನಲ್ಲಿ ನಡೆದ ಕೆಕೆಆರ್- ಆರ್ ಸಿಬಿ ನಡುವಿನ ಪಂದ್ಯದ ವೇಳೆ ಇಬ್ಬರ ಮಧ್ಯೆ ಪರಸ್ಪರ ಘರ್ಷಣೆ ನಡೆಯುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು, ಆದರೆ ಟೈಮ್-ಔಟ್ ಸಮಯದಲ್ಲಿ ಕೊಹ್ಲಿ ಮತ್ತು ಗಂಭೀರ್ ಪರಸ್ಪರ ತಬ್ಬಿಕೊಳ್ಳುವ ಮೂಲಕ ಎಲ್ಲರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದರು.

ಇಬ್ಬರೂ ಮಾಜಿ ನಾಯಕರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ಒಂದು ದಿನದ ಮೊದಲು ಸುದೀರ್ಘ ಮಾತುಕತೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಬಹು ನಿರೀಕ್ಷಿತ ಪಂದ್ಯಕ್ಕಾಗಿ ಶುಕ್ರವಾರ ಕೊಹ್ಲಿ ಕೋಲ್ಕತ್ತಾ ತಲುಪಿದ್ದರು.

ಎರಡನೇ ಗೆಲುವಿಗಾಗಿ ಹುಡುಕಾಟ
ಐಪಿಎಲ್ 2024ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೂ ಆಡಿರುವ 7 ಪಂದ್ಯಗಳಲ್ಲಿ ಕೇವಲ ಒಂದು ಬಾರಿ ಮಾತ್ರ ಗೆಲುವು ಸಾಧಿಸಿದ್ದು, ಉಳಿದ ಆರು ಪಂದ್ಯಗಳಲ್ಲಿ ಸೋಲು ಕಂಡಿದೆ. ಎರಡನೇ ಜಯಕ್ಕಾಗಿ ಹುಡುಕುತ್ತಿರುವ ಆರ್ ಸಿಬಿ ಭಾನುವಾರ ಕೆಕೆಆರ್ ತಂಡವನ್ನು ಎದುರಿಸಲಿದೆ.

ಮತ್ತೊಂದು ವಿಶೇಷತೆ ಎಂದರೆ ಭಾನುವಾರ ಆರ್ ಸಿಬಿ ಹಸಿರು ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಭಾನುವಾರ ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದ್ದು, ಎರಡನೇ ಗೆಲುವು ದಾಖಲಿಸುವ ವಿಶ್ವಾಸದಲ್ಲಿದೆ.
Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)