ಬೆಂಗಳೂರು, ಏಪ್ರಿಲ್.06: ದಿನೇ ದಿನೇ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ರಾಜ್ಯದಲ್ಲಿಯೂ ಎಲೆಕ್ಷನ್ ಕಾವು ಜೋರಾಗಿಯೇ ಇದೆ. ಹೊಸ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಬೆಂಗಳೂರು ದಕ್ಷಿಣದ ಹಾಲಿ ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಎದುರಾಳಿಯಾಗಿ ಮಾಝಿ ಶಾಸಕ ವಾಟಾಳ್ ನಾಗರಾಜ್ ಚುನಾವಣೆ ಎದುರಿಸಲಿದ್ದಾರೆ. ಏನೇ ಮಾಡಿದರೂ ಸದ್ದು ಮಾಡುವ ಅವರು, ಸರಳವಾಗಿ ಆಟೋರಿಕ್ಷಾದಲ್ಲಿ ಬಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ದಕ್ಷಿಣದಿಂದ ವಾಟಾಳ್ ನಾಗರಾಜ್ ಸ್ಪರ್ಧೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ತೇಜಸ್ವಿ ಸೂರ್ಯ. ಈ ಬಾರಿಯೂ ಬಿಜೆಪಿ ಅವರಿಗೆ ಮಣೆ ಹಾಕಿದೆ. ಇನ್ನೂ, ಕಾಂಗ್ರೆಸ್ ಪಕ್ಷದಿಂದ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗಿದೆ. ಹೀಗಾಗಿಯೇ ಈ ಬಾರಿ ಜಿದ್ದಾಜಿದ್ದಿನ ಹೋರಾಟ ನಡೆಯುವುದು ಖಂಡಿತ. ಇದರ ಜೊತೆಯಲ್ಲಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಮತ್ತಷ್ಟು ರಂಗು ನೀಡಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.