ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ನಂಬರ್‌ 1ನಲ್ಲಿದ್ದ ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನಕ್ಕೆ ಕುಸಿತ-ಕಾರಣ ಏನು?

Arun Kumar
0

ಹಿರಿಯೂರು, ಮೆ, 09: ಇಂದು (ಮೇ 09) 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ಪ್ರಥಮ ಸ್ಥಾನದಲ್ಲಿದ್ದ ಚಿತ್ರದುರ್ಗ ಜಿಲ್ಲೆ ಈ ಬಾರಿ 21ನೇ ಸ್ಥಾನಕ್ಕೆ ಕುಸಿದಿದೆ.

ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ 72.85%ರಷ್ಟು ಫಲಿತಾಂಶ ಲಭಿಸಿದ್ದು, ಈ ಮೂಲಕ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನಪಡೆದುಕೊಂಡಿದ್ದು, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೇ ಸ್ಥಾನ ಪಡೆದಿದೆ. ಇದರ ಮಧ್ಯೆ ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ.

ಜಿಲ್ಲೆಯಲ್ಲಿ 22,275 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 16,227 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಿಂದ ರಾಜ್ಯದ ಫಲಿತಾಂಶದಲ್ಲಿ ಜಿಲ್ಲೆ 21ನೇ ಸ್ಥಾನಕ್ಕೆ ಕುಸಿದಿದೆ. ಇನ್ನು 2023ರ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದ ಜಿಲ್ಲೆ, ಈ ಬಾರಿ 21ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಫಲಿತಾಂಶಕ್ಕಿಂತ ಜಿಲ್ಲೆಗೆ ಈ ವರ್ಷದ ಫಲಿತಾಂಶದಲ್ಲಿ ಸಾಕಷ್ಟು ಹಿನ್ನಡೆಯಾಗಿದೆ ಎನ್ನಬಹುದು.

620 ಅಂಕ ಪಡೆದ ವಿದ್ಯಾರ್ಥಿನಿ: ಇನ್ನು ಮತ್ತೊಂದೆಡೆ 625ಕ್ಕೆ 620 ಅಂಕ ಪಡೆಯುವ ಮೂಲಕ ತನುಶ್ರೀ ಹಾಗೂ ಹಿರಣ್ಮಯಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಾದ ತನುಶ್ರೀ ಹಾಗೂ ಹಿರಣ್ಮಯಿ ಇವರು ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಸನ್ಮಾನ ಮಾಡಿ ಗೌರವಿಸಿದರು.

ಈ ಕುರಿತು ಮಾತನಾಡಿದ ಕ್ಷೇತ್ರಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಅವರು, ತಾಲೂಕಿನಲ್ಲಿ 14 ಶಾಲೆಗಳಿಗೆ ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ. ಇದರಿಂದ ಜಿಲ್ಲೆಯ ವ್ಯಾಪ್ತಿಯಲ್ಲಿ ತಾಲೂಕಿಗೆ ಶೇಕಡಾ 75.04ರಷ್ಟು ಫಲಿತಾಂಶ ಬಂದಿದ್ದು, ಜಿಲ್ಲೆಯಲ್ಲಿ ಹಿರಿಯೂರು 2ನೇ ಸ್ಥಾನ ಗಳಿಸಿದೆ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)