ಮಂಡ್ಯ, ಮೇ 10: ಕರ್ನಾಟಕದಲ್ಲಿ ಎರಡು ಹಂತದ ಲೋಕಸಭಾ ಚುನಾವಣೆ ನಡೆದಿದೆ. 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಆಡಳಿತರೂಢ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಹಲವು ತಂತ್ರಗಾರಿಕೆ ನಡೆಸಿ ಚುನಾವಣೆಯನ್ನ ಎದುರಿಸಿವೆ. ಇನ್ನೂ 28 ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದು, ಗೆಲ್ಲುವ ಕ್ಷೇತ್ರಗಳ ಕುರಿತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನರೇಂದ್ರಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ದೇಶದ ರಕ್ಷಣೆ, ಅಭಿವೃದ್ಧಿ ವಿಚಾರದಲ್ಲಿ ಅವರು ಮಾಡಿದ ಕೆಲಸ ಗೆಲುವಿಗೆ ಕಾರಣವಾಗಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ರಾಜ್ಯದ 28 ಕ್ಷೇತ್ರಗಳಲ್ಲೂ ಎನ್ಡಿಎ ಅಭ್ಯರ್ಥಿಗಳ ಗೆಲುವು ಖಚಿತ. ಮಂಡ್ಯದಲ್ಲಿಯೂ ಕುಮಾರಸ್ವಾಮಿ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಚುನಾವಣೆಯಲ್ಲಿ ದುಡಿದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ರಾಜ್ಯ ಕಟ್ಟಲು ಹಾಗೂ ಕುಮಾರಸ್ವಾಮಿ ಅವರ ರೈತಪರ ಕಾಳಜಿ ಗಮನಿಸಿ ರಾಷ್ಟ್ರೀಯ ನಾಯಕರು ಶಕ್ತಿ ತುಂಬುತ್ತಾರೆ ಎಂಬ ನಂಬಿಕೆ ಇದೆ. ಅದರಂತೆ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರಿಗೆ ಎಸ್ಐಟಿಯವರು ಒತ್ತಡ ಹಾಕುತ್ತಿರುವುದು ಗಮನಕ್ಕೆ ಬಂದಿದೆ. ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಸಂತ್ರಸ್ತೆಯರ ಮುಖ ಬ್ಲರ್ ಮಾಡದೇ ಪೆನ್ಡ್ರೈವ್ ಹಂಚಿರುವ ಪಾಪಿಗಳ ವಿರುದ್ಧ ತನಿಖೆ ಆಗಬೇಕು. ರಾಜ್ಯ ಸರ್ಕಾರ ಎಲ್ಲವನ್ನು ಕೈಯಲ್ಲಿ ಇಟ್ಟುಕೊಂಡಿದ್ದಾರೆ. ಚಲುವರಾಯಸ್ವಾಮಿ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸುಮ್ಮನೆ ಅಪಪ್ರಚಾರ ಮಾಡುವುದು ಆರೋಪ ಮಾಡುವುದು ಸೂಕ್ತ ಅಲ್ಲ. ಈ ತನಿಖೆಯನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸಿದರು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.