Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭರ್ಜರಿ ಮಳೆ, ವಾಹನ ಸವಾರರೇ ಎಚ್ಚರ!

Arun Kumar
0

ಬೆಂಗಳೂರು, ಮೇ 12: ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಮಧ್ಯಾಹ್ನನದಿಂದಲೇ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಗರದ ಎಲೆಕ್ಟ್ರಾನಿಸಿಟಿ ಭಾಗದ ಕೂಡ್ಲ್ ಗೇಟ್, ಬೊಮ್ಮನಹಳ್ಳಿ ಸೇರಿದಂತೆ ವಿವಿಧೆಡೆ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಿದೆ. ಈ ಭಾಗದ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಟ್ರಾಫಿಕ್ ಜಾಮ್ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಎಚ್ಚರ ವಹಿಸಬೇಕಾಗಿದೆ.

ಇಂದಿನಿಂದ ಮೇ 15ರವರೆಗೆ ಬೆಂಗಳೂರು ನಗರಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ ಸಂಭವವಿದೆ. ಈಗಾಗಲೇ ನಗರದ ಕೆಲವು ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದೆ. ಇಷ್ಟು ದಿನ ಬಿಸಿಲಿನಿಂದ ಬಸವಳಿಯ ಸಿಲಿಕಾನ್ ಸಿಟಿ ಜನರಿಗೆ ವರುಣ ತಂಪೆರೆದಿದ್ದು, ಕಾದ ಕಾವಲಿಯಂತಾಗಿದ್ದ ಭೂಮಿ ತಂಪಾಗಿದೆ.

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಸಿಡಿಲು ಗುಡುಗು, ಗಾಳಿ ಸಹಿತ ಭರ್ಜರಿ ಮಳೆಯಾಗಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಹಾಗೂ ಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯಿಂದಾಗಿ ನಗರದ ಕೆಲವು ಬಡಾವಣೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಕಡಿತಗೊಳಿಸಲಾಗಿದೆ.

4 ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆ
ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಇದೆ. ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಇದೆ. 4 ದಿನಗಳ ಕಾಲ ಉತ್ತರ ಒಳನಾಡು, ದಕ್ಷಿಣ ಒಳನಾಡಿಲ್ಲಿ ಮಳೆ ಆಗಲಿದ್ದು ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)