Bengaluru: ಗಮನಿಸಿ ಈ ರೈಲುಗಳ ಸಮಯದಲ್ಲಿ ಬದಲಾವಣೆ: ಜೂನ್‌ನಿಂದ ಹೊಸ ವೇಳಾಪಟ್ಟಿ

Arun Kumar
0

ಬೆಂಗಳೂರು, ಮೇ 18: ಭಾರತೀಯ ರೈಲ್ವೆಯ ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಏಳು ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು SWR ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ಮಾಹಿತಿ ನೀಡಿದ್ದಾರೆ.

ನೈಋತ್ಯ ರೈಲ್ವೆ ವಲಯ ಅಧಿಕಾರಿಗಳ ವ್ಯಾಪ್ತಿಯಲ್ಲಿ, ಕರ್ನಾಟಕದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಬೆಂಗಳೂರಿನಿಂದ ತಿರುಪತಿಗೆ ಹೊರಡುವ ಹರಿಪ್ರಿಯ ರೈಲು ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಗದಗ, ಕೊಪ್ಪಳ, ಬಳ್ಳಾರಿ ಮಾರ್ಗಮಾಗಿ ಸಂಚರಿಸುತ್ತದೆ.

ಬೆಂಗಳೂರು ಮಾರ್ಗವಾಗಿ ಮೈಸೂರಿನಿಂದ ಹೋಗುವ ಕಾಚೀಗುಡ ರೈಲು, ನೆರೆ ರಾಜ್ಯ ಗೋವಾದ ವಾಸ್ಕೋದಿಂದ ಕರ್ನಾಟಕ ಮಾರ್ಗವಾಗಿ ಸಂಚರಿಸುವ ನಾಲ್ಕು ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಕಾರ್ಯಾಚರಣೆ ಪರಿಣಾಮವಾಗಿ ಕೆಲವು ರೈಲುಗಳ ಸಮಯ ಪರಿಷ್ಕರಿಸಳಾಗಿದೆ ಎಂದು ಕನಮಡಿ ತಿಳಿಸಿದ್ದಾರೆ.

ಈ ರೈಲುಗಳು ಆಯಾ ನಿಲ್ದಾಣಗಳಿಗೆ ಬರುವ ಸಮಯದಲ್ಲಿ ದಬಲಾವಣೆ ಆಗಿದೆ. ಈ ರೈಲುಗಳ ಬದಲಾವಣೆ ಸಮಯ ಜೂನ್ ಮೊದಲ ವಾರದಿಂದ ಅನುಷ್ಠಾನಕ್ಕೆ ಬರಲಿದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)