Big Breaking: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಎಸ್‌ಐಟಿ ವಶಕ್ಕೆ

Arun Kumar
0

ಬೆಂಗಳೂರು, ಮೇ. 04: ದೇಶದ ಗಮನವನ್ನೇ ತನ್ನತ್ತ ಸೆಳೆದಿರುವ ಹಾಸನದ ಲಯಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೊನೆಗೂ ಚೇತರಿಕೆ ಕಂಡು ಬಂದಿದೆ. ತಮ್ಮ ಮಗ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಜೊತೆಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

ಲಯಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜನಪ್ರತಿನಿಧಿ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಜಾಮೀನು ಸಿಗದ ಬೆನ್ನಲ್ಲೇ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ಬೆಂಗಳೂರಿನಲ್ಲಿರುವ ಮಾಜಿ ಪ್ರಧಾನಿ ಮತ್ತು ಅವರ ತಂದೆ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಅವರನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಎಚ್ ಡಿ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಕಾಣಿಸಿಕೊಂಡಿರುವ ಅನೇಕ ಮಹಿಳೆಯರಲ್ಲಿ ಒಬ್ಬರಾಗಿದ್ದ ತನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು 20 ವರ್ಷದ ವ್ಯಕ್ತಿಯೊಬ್ಬರು ಮೈಸೂರಿನಲ್ಲಿ ಕೆಆರ್ ನಗರ ಠಾಣೆಯಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ. ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

ಹೊಳೆನರಸೀಪುರದಲ್ಲಿ ಗದ್ದಲ
ಇತ್ತ, ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯ ಭಾಗವಾಗಿ ವಿಶೇಷ ತನಿಖಾ ತಂಡ ಹೊಳೆನರಸೀಪುರದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿತ್ತು. ಈ ವೇಳೆ ಶಾಸಕರ ಬೆಂಬಲಿಗರು ಅವರ ನಿವಾಸಕ್ಕೆ ನುಗ್ಗಿದ್ದರಿಂದ ಕೆಲ ಕಾಲ ಗೊಂದಲ ಉಂಟಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣ ವಿರುದ್ಧ ಎಸ್ಐಟಿ ಶನಿವಾರ ಎರಡನೇ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ. ಇದರ ಜೊತೆಗೆ ಕೇಂದ್ರ ತನಿಖಾ ದಳವು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದೆ.

Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)