ಹುಬ್ಬಳ್ಳಿ, ಮೇ 02: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕುಡಿಯಲು ನೀರಿಗೆ ಹಾಹಾಕಾರ ಮುಂದುವರಿದಿದೆ. ಇದೀಗ ಹುಬ್ಬಳ್ಳಿಯ ನಿವಾಸಿಗಳು ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.
ಹೌದು, ಹುಬ್ಬಳ್ಳಿಯಲ್ಲಿನ ವಿದ್ಯಾನಗರದ ತಿಮ್ಮಸಾಗರ ಬಡಾವಣೆ ನಿವಾಸಿಗಳು ಕುಡಿಯುವ ನೀರಿಗಾಗಿ ಆಗ್ರಹಿಸಿ ಗುರುವಾರ ಹೊಸೂರು ಕೋರ್ಟ್ ಎದುರು ಖಾಲಿಕೊಡ ಪ್ರದರ್ಶಿಸಿ, ರಸ್ತೆ ತಡೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಕನಿಷ್ಠ ಸೌಲಭ್ಯವಾದ ಕುಡಿಯುವ ನೀರು ಕೊಡಲು ಸಾಧ್ಯವಾಗದ ಪಾಲಿಕೆಗೆ ಹಾಗೂ ಜನರ ಸಮಸ್ಯೆ ಆಲಿಸದ ಪಾಲಿಕೆ ಸದಸ್ಯರಿಗೆ, ಶಾಸಕರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀರು ಕೊಡದಿದ್ದರೆ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಅವರೆಲ್ಲ ಎಚ್ಚರಿಕೆ ನೀಡಿದರು.
10-15 ದಿನಕ್ಕೊಮ್ಮೆ ನೀರು ಪೂರೈಕೆ: ಸಂಕಷ್ಟ
ಜಲಮಂಡಳಿ ಸುಪರ್ದಿಯಲ್ಲಿ ಇದ್ದಾಗ ಐದು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಸುತ್ತಿದ್ದರು. ಎರಡು ವರ್ಷದ ಹಿಂದೆ ಎಲ್ ಆ್ಯಂಡ್ ಟಿ ಕಂಪನಿಗೆ ಹಸ್ತಾಂತರಿಸಿದ ನಂತರ, ಏಳು ದಿನಕ್ಕೊಮ್ಮೆ ನೀರು ಪೂರೈಸಲು ಆರಂಭಿಸಿದರು. ಎರಡು ತಿಂಗಳಿನಿಂದ 10-15 ದಿನಗಳಿಗೊಮ್ಮೆ ಪೂರೈಸಲಾಗುತ್ತಿದೆ.
ಬೆಳಗ್ಗೆಯಿಂದ ಪಾಲಿಕೆಗೆ, ಎಲ್ ಆ್ಯಂಡ್ ಟಿ ಕಂಪನಿಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ನಿವಾಸಿಗಳೆಲ್ಲ ಒಟ್ಟಾಗಿ ಚುನಾವಣೆ ಬಹಿಷ್ಕಾರಿಸಲು ತೀರ್ಮಾನಿಸಿದ್ದೇವೆ' ಎಂದು ನಿವಾಸಿ ಆಶಾ ವಿವರಿಸಿದರು.
ಸಮಸ್ಯೆ ಆಲಿಸದ ಅಧಿಕಾರಿಗಳು-ಜನಪ್ರತಿನಿಧಿಗಳು
ಡಾ. ಸಿ.ಪಿ. ಸಿಂಧೂರ ಮಾತನಾಡಿ, 'ಸ್ಥಳೀಯ ನಿವಾಸಿಗಳು ಪಾಲಿಕೆಗೆ ಸಾಕಷ್ಟು ದೂರು ನೀಡಿದ್ದರೂ, ಯಾರೊಬ್ಬರೂ ಸಮಸ್ಯೆ ಆಲಿಸುತ್ತಿಲ್ಲ. ಪಾಲಿಕೆ ಅಧಿಕಾರಿಗಳು, ಸದಸ್ಯರು, ಶಾಸಕರುಮಲಗಿದ್ದಾರೆ. ಕುಡಿಯುವ ನೀರಿಗಾಗಿ ಬೀದಿಗೆ ಇಳಿದು ಪ್ರತಿಭಟಿಸುವ ಪರಿಸ್ಥಿತಿ ಬಂದಿರುವುದು ದೊಡ್ಡ ದುರಂತ ಎಂದರು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.