ಡಾ. ಶಿವರಾಮ ಕಾರಂತ ಬಡಾವಣೆ: ಸೈಟಿಗೆ ಅರ್ಜಿ ಹಾಕಲು ಸಿದ್ಧರಾಗಿ

Arun Kumar
0

ಬೆಂಗಳೂರು, ಮೇ 26: ಬೆಂಗಳೂರು ನಗರದ ಜನರಿಗೆ ಬಿಡಿಎ ಸಿಹಿಸುದ್ದಿ ನೀಡಿದೆ. ಶೀಘ್ರದಲ್ಲೇ ಡಾ. ಶಿವರಾಮ ಕಾರಂತ ಬಡಾವಣೆಯ ಸೈಟುಗಳನ್ನು ಆನ್ಲೈನ್ ಮೂಲಕ ಮಾರಾಟ ಮಾಡಲಾಗುತ್ತದೆ. ಆಸಕ್ತರು ಸೈಟು ಕೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಬಹುದು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಹತ್ವದ ಯೋಜನೆ ಡಾ. ಶಿವರಾಮ ಕಾರಂತ ಬಡಾವಣೆ. ಸುಮಾರು 3,546 ಎಕರೆ ಮತ್ತು 12 ಗುಂಟೆ ಪ್ರದೇಶದಲ್ಲಿ 34 ಸಾವಿರ ನಿವೇಶನಗಳನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ಸುಮಾರು 10-12 ಸಾವಿರ ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುತ್ತದೆ.

ಕರ್ನಾಟಕ ಹೈಕೋರ್ಟ್ ಮೇ 30ರಂದು ನೀಡುವ ತೀರ್ಪಿನಲ್ಲಿ ಡಾ. ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಒಪ್ಪಿಗೆ ನೀಡುವ ನಿರೀಕ್ಷೆ ಇದೆ. ಉತ್ತರ ಬೆಂಗಳೂರು ಭಾಗದಲ್ಲಿ ಬಿಡಿಎ ನಿರ್ಮಾಣ ಮಾಡಿರುವ ಪ್ರತಿಷ್ಠಿತ ಬಡಾವಣೆ ಇದಾಗಿದೆ. ಅರ್ಜಿ ಕರೆಯುವುದು, ಸೈಟು ಹಂಚಿಕೆ ಎಲ್ಲವೂ ಆನ್ಲೈನ್ನಲ್ಲಿಯೇ ನಡೆಯಲಿದೆ.

10 ಸಾವಿರ ಸೈಟು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರುವ ಡಾ. ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ರೈತರಿಗೆ 17 ಸಾವಿರ ಸೈಟುಗಳು ಸಿಗಲಿವೆ. ಉಳಿದ 10 ಸಾವಿರ ಸೈಟುಗಳನ್ನು ಸದ್ಯ ಜನರಿಗೆ ಹಂಚಿಕೆ ಮಾಡಲಾಗುತ್ತದೆ.

ಬಿಡಿಎ ಅಧಿಕಾರಿಗಳ ಪ್ರಕಾರ ಸೈಟಿಗೆ ಅರ್ಜಿ ಸಲ್ಲಿಕೆ ಮಾಡುವವರು ಶೇ 12.05ರಷ್ಟು ಹಣವನ್ನು ಯುಪಿಐ ಪಾವತಿ ಮೂಲಕ ಕಟ್ಟಬೇಕು. ಡಿಡಿ ಅಥವ ಚೆಕ್ ಮೂಲಕ ಪಾವತಿ ಮಾಡಲು ಅವಕಾಶವಿಲ್ಲ.

ಬಿಡಿಎ ಅಧಿಕಾರಿಗಳ ಪ್ರಕಾರ ಸೈಟಿಗೆ ಅರ್ಜಿ ಸಲ್ಲಿಕೆ ಮಾಡುವವರು ಶೇ 12.05ರಷ್ಟು ಹಣವನ್ನು ಯುಪಿಐ ಪಾವತಿ ಮೂಲಕ ಕಟ್ಟಬೇಕು. ಡಿಡಿ ಅಥವ ಚೆಕ್ ಮೂಲಕ ಪಾವತಿ ಮಾಡಲು ಅವಕಾಶವಿಲ್ಲ.

ಆನ್ಲೈನ್ ಮೂಲಕ ಬುಕ್ ಮಾಡಲು ತಿಳಿಯದವರು ಹತ್ತಿರದ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಬಹುದು. ಅಲ್ಲದೇ ಇದರ ಒಪ್ಪಂದಕ್ಕಾಗಿಯೇ ಕೆನರಾ, ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕರ್ನಾಟಕ ಸೇರಿದಂತೆ 9 ಬ್ಯಾಂಕ್ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗುತ್ತದೆ.

ಬಿಡಿಎ ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಸುಮಾರು 5 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಈ ಬಡಾವಣೆ ನಿವೇಶನ ಹಂಚಿಕೆಯಿಂದ ಬಿಡಿಎ ಹೆಚ್ಚು ಆದಾಯವನ್ನು ನಿರೀಕ್ಷೆ ಮಾಡಿದೆ. ಸೈಟುಗಳ ಬೆಲೆಗಳು ಎಷ್ಟಾಗಲಿವೆ? ಎಂಬ ಮಾಹಿತಿ ಇನ್ನೂ ಸಿಕ್ಕಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)