ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು: ಸಿದ್ದರಾಮಯ್ಯನವರೇ ಮೊದಲು ಕ್ಯಾಬಿನೆಟ್‌ ನಿಂದ ಕಿತ್ತಾಕಿ: ಕುಮಾರಸ್ವಾಮಿ

Arun Kumar
0

ಬೆಂಗಳೂರು, ಮೇ 07: ಪ್ರಜ್ವಲ್ ರೇವಣ್ಣ ಅವರ ಪ್ರಕರಣಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪದಲ್ಲಿ ನಡೆಯುವ ತನಿಖೆಯಿಂದ ವಾಸ್ತವ ಹೊರಬರುವುದಿಲ್ಲ. ಅಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇಟ್ಟುಕೊಂಡು ತನಿಖೆ ಮಾಡಿದರೆ ಸೂಕ್ತ ರೀತಿಯಲ್ಲಿ ತನಿಖೆ ಸಾಗದು. ಹೀಗಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆ ಮುಂದುವರಿಸಲಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಡಿ ಕೆ ಶಿವಕುಮಾರ್ ಅವರ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಕಿತ್ತು ಬೀಸಾಕಿ
ರೇವಣ್ಣ ಅವರನ್ನ ವಶಕ್ಕೆ ಪಡೆದ್ರಲ್ಲ ಸಿಎಂ ಅವರೇ. ಮೊದಲ ಕ್ಯಾಬಿನೆಟ್ ನಿಂದ ಡಿ ಕೆ ಶಿವಕುಮಾರ್ ಅವರನ್ನ ಕಿತ್ತಾಕಿ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಮ್ಮ ಹೆಸರನ್ನ ಪದೇ ಪದೇ ಬಳಸಿಕೊಳ್ಳುತ್ತಿದ್ದ ಹಿನ್ನೆಲೆ ತಡೆಯಾಜ್ಞೆ ತಂದಿದ್ದೇನೆ. ನಾನು ಇಲ್ಲಿ ಇವತ್ತು ಜನಪ್ರತಿನಿಧಿಯಾಗಿ, ಶಾಸಕಾಂಗ ಪಕ್ಷದ ನಾಯಕನಾಗಿ ರಾಜ್ಯದಲ್ಲಿ ದಾರಿ ತಪ್ತಿದೆ, ಆ ಜವಬ್ದಾರಿಯಿಂದ ಕೂತಿದ್ದೇನೆ. ನನ್ನ ವೈಯಕ್ತಿಕ ಅಲ್ಲ ಇದು, ರಾಜ್ಯದ ಬೆಳವಣಿಗೆಯ ಹಿನ್ನೆಲೆಯಲ್ಲಿ ಜನತೆ ಮುಂದೆ ತರಲು ಇಲ್ಲಿ ಬಂದು ಮಾತನಾಡಿದ್ದೇನೆ ಎಂದು ಹೇಳಿದರು.

ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಇದುವರೆಗೂ ಯಾಕೆ ಎಸ್ಐಟಿ ತನಿಖೆ ಮಾಡಿಲ್ಲ? 400 ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಎನ್ನುತ್ತಾರೆ. ಹಾಗಾದರೆ ಯಾಕೆ ರಾಹುಲ್ ಗಾಂಧಿಯವರನ್ನು ಇನ್ನು ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಇನ್ನೂ ನಾನು ಪ್ರಜ್ವಲ್ ರೇವಣ್ಣರನ್ನ ವಹಿಸಿಕೊಂಡು ಮಾತನಾಡುತ್ತಿಲ್ಲ. ಒಂದು ತನಿಖೆ ಪ್ರಾರಂಭ ಮಾಡಿದಾಗ ಮಾಹಿತಿ ಸೋರಿಕೆ ಆಗಬಾರದು. ಸರ್ಕಾರಕ್ಕೆ, ಸಂತ್ರಸ್ತೆಯರಿಗೆ ರಕ್ಷಣೆ ಕೊಡುವುದು ಬೇಕಾಗಿಲ್ಲ. ಈ ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಪ್ರಚಾರ ಅಷ್ಟೇ. ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಪರ ಏಪ್ರಿಲ್ 22 ರಂದು ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಏಪ್ರಿಲ್ 22ರಂದು ಪ್ರಜ್ವಲ್ ಪಕ್ಕದಲ್ಲಿ ಕುಳಿತ ಹೆಣ್ಣು ಮಗಳು ಯಾರು? ಅತ್ಯಾಚಾರ ಆಗಿದ್ರೆ ಆ ಹೆಣ್ಮಗಳು ಯಾಕೆ ಒಂದೇ ವೇದಿಕೆಯಲ್ಲಿ ಇರುತ್ತಿದ್ದರು?ಪ್ರಜ್ವಲ್ ಪಕ್ಕ ಆ ಹೆಣ್ಣು ಮಗಳು ಯಾಕೆ ಕುಳಿತುಕೊಳ್ಳುತ್ತಿದ್ದರು ಎಂದು ಪ್ರಶ್ನಿಸಿದರು.
Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)