BREAKING: ರಾಜಧಾನಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆ: ಪೊಲೀಸ್ ಹೈ ಅಲರ್ಟ್

Arun Kumar
0

ನವದೆಹಲಿ, ಮೇ 12: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಾಂಬ್ ಬೆದರಿಕೆ ಕರೆಗಳ ಹಾವಳಿ ಮುಂದುವರಿದಿದೆ. ಕೆಲವು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಬಂದಿತ್ತು. ಇದರ ಬೆನ್ನಲ್ಲೆ ನಗರದ ಎರಡು ಪ್ರಮುಖ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ.

ದೆಹಲಿಯ ಬುರಾರಿ ಆಸ್ಪತ್ರೆ ಮತ್ತು ಸಂಜಯ್ ಗಾಂಧಿ ಆಸ್ಪತ್ರೆಗಳು ಭಾನುವಾರ ಬಾಂಬ್ ಬೆದರಿಕೆ ಮೇಲ್ ಗಳನ್ನು ಸ್ವೀಕರಿಸಿವೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆಸ್ಪತ್ರೆಗಳಲ್ಲಿ ಎಲ್ಲೆಡೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಗಳಲ್ಲಿ ಶ್ವಾನ ದಳದಿಂದ ಪೊಲೀಸ್ ಶೋಧ
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಎರಡೂ ಆಸ್ಪತ್ರೆಗಳಲ್ಲಿ ಶ್ವಾನ ದಳದಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ದೆಹಲಿ ಉತ್ತರದ ಡಿಸಿಪಿ ಪ್ರಕಾರ, ಬಾಂಬ್ ಬೆದರಿಕೆಯ ಬಗ್ಗೆ ಆಸ್ಪತ್ರೆಗೆ ಯಾರೋ ಇಮೇಲ್ ಕಳುಹಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಮೇತ ಪೊಲೀಸರು ಸ್ಥಳದಲ್ಲಿದ್ದಾರೆ.

ಈ ಆಸ್ಪತ್ರೆಗಳಲ್ಲಿ ಯಾವುದೇ ಸ್ಫೋಟಕ ವಸ್ತುಗಳಿವೆಯೇ ಎಂದು ಪರಿಶೀಲಿಸಲಾಗುತ್ತಿದೆ. ಅದೃಷ್ಟವಶಾತ್ ಇದುವರೆಗೆ ಯಾವುದೇ ಅನುಮಾನಾಸ್ಪದವಾಗಿ ಪತ್ತೆಯಾಗಿಲ್ಲ. ಇ-ಮೇಲ್ ಬಂದಿದ್ದರ ಕುರಿತು ತನಿಖೆ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಮೇ 1 ರಂದು 100 ಶಾಲೆಗಳಲ್ಲಿ ಬಾಂಬ್ ಬೆದರಿಕೆ
ಇದೇ ತಿಂಗಳು ಮೇ 1 ರಂದು ನವದೆಹಲಿ ಮತ್ತು ನೋಯ್ಡಾದ 100 ಶಾಲೆಗಳಲ್ಲಿ ಬಾಂಬ್ ಇದೆ ಎಂದು ಹೀಗೆಯೇ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದವು. ಈ ಕಾರಣಕ್ಕಾಗಿ ಎಲ್ಲ ಶಾಲೆಗಳನ್ನು ಬಂದ್ ಮಾಡಿ, ಸೂಕ್ತ ತಪಾಸಣೆ ನಡೆಸಲಾಗಿತ್ತು. ಇದರಿಂದ ಇಡೀ ದೆಹಲಿಯೇ ಬೆಚ್ಚಿ ಬಿದ್ದಿದ್ದು, ನಿವಾಸಿಗಳು, ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗಿದ್ದರು.

ಮುಂಜಾಗೃತಾ ದೃಷ್ಟಿಯಿಂದ ಎಲ್ಲಾ ಶಾಲೆಗಳನ್ನು ಮುಚ್ಚುವ ಜೊತೆಗೆ ತ್ವರಿತವಾಗಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಪ್ರತಿ ಶಾಲೆಯಲ್ಲೂ ಕೂಲಂಕುಷವಾಗಿ ಹುಡುಕಾಟ ನಡೆಸಿದ್ದರು. ಆದರೆ ಅಂದಿನ ಬೆದರಿಕೆಗಳು ಹುಸಿಯಾಗಿತ್ತು ಎಂದು ತಿಳಿದು ಬಂದಿದೆ. ಈ ಘಟನೆ ಮಾಸುವ ಮುನ್ನವೇ ದೆಹಲಿ ಎರಡು ಪ್ರಮುಖ ಆಸ್ಪತ್ರೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆಗಳು ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)