IPL 2024: ಮುಂಬೈ-ಹೈದರಾಬಾದ್‌ ನಡುವೆ ಮೆಗಾ ಫೈಟ್

Arun Kumar
0

ಮೇ 6 ಸೋಮವಾರ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 55ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ಹಾಗು ಮುಂಬೈ ಇಂಡಿಯನ್ಸ್ (ಎಂಐ) ತಂಡಗಳು ಮುಖಾಮುಖಿಯಾಗಿವೆ.

ಮೊದಲು ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ಮುನ್ನೆಡೆಸುತ್ತಿರುವ ಸನ್ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್ ಮಾಡಲಿದೆ.

17ನೇ ಐಪಿಎಲ್ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಸನ್ರೈಸರ್ಸ್ ಹೈದರಾಬಾದ್ ಆಡಿರುವ 10 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 4ರಲ್ಲಿ ಸೋಲು ಕಂಡು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇತ್ತ ಟೂರ್ನಿಯಲ್ಲಿ ಸೋಲಿನ ಸರಪಳಿಯಲ್ಲಿ ಸಿಲುಕಿರುವ ಮುಂಬೈ ಇಂಡಿಯನ್ಸ್ 11 ಪಂದ್ಯಗಳಲ್ಲಿ ಕೇವಲ 3ರಲ್ಲಿ ಗೆಲುವು ಸಾಧಿಸಿ 8ರಲ್ಲಿ ಸೋತಿದೆ. ಇದರಿಂದ ಅಂಕಪಟ್ಟಿಯಲ್ಲಿ ಕೊನೆಸ್ಥಾನದಲ್ಲಿದೆ.

ಎಂಐ vs ಎಸ್ಆರ್ಹೆಚ್ ಪಂದ್ಯದ ಟಿವಿ,ಲೈವ್ ಸ್ಟ್ರೀಮಿಂಗ್ ವಿವರ
ಮುಂಬೈ ಇಂಡಿಯನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಆರಂಭವಾಗಿರುವ ಐಪಿಎಲ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಎಂಐ vs ಎಸ್ಆರ್ಹೆಚ್ ಆಡುವ 11ರ ಬಳಗ
ಮುಂಬೈ ಇಂಡಿಯನ್ಸ್ ತಂಡ : ಇಶಾನ್ ಕಿಶನ್ (ವಿ.ಕೀ), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ

ಸನ್ರೈಸರ್ಸ್ ಹೈದರಾಬಾದ್ ತಂಡ : ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್(ವಿ.ಕೀ), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್
Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)