KN Rajanna: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ಸಚಿವ ಸ್ಥಾನಕ್ಕೆ ರಾಜೀನಾಮೆ; ಕೆಎನ್ ರಾಜಣ್ಣ

Arun Kumar
0

ಬೆಂಗಳೂರು, ಮೇ. 26: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿಯೂ ಹಲವು ಬದಲಾವಣೆಗಳಾಗಲಿವೆ. ಸಂಪುಟ ಸರ್ಕರಿಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷದ ಬದಲಾವಣೆ ವಿಚಾರವೂ ಮುನ್ನೆಲೆಗೆ ಬಂದಿದೆ. ಹೀಗಾಗಿ ಹಲವು ನಾಯಕರು ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅದರಲ್ಲಿ ಸಚಿವರು ಇದ್ದಾರೆ.

ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ತಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಅಧ್ಯಕ್ಷನಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಶನಿವಾರ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಸಭೆಗಳಲ್ಲಿ ಕೆಪಿಸಿಸಿ ಜವಾಬ್ದಾರಿಯಿಂದ ಹೊರಬರುವ ಇಂಗಿತವನ್ನು ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಚರ್ಚೆ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಚಿವರಾದ ಜಿ.ಪರಮೇಶ್ವರ ಮತ್ತು ಸತೀಶ ಜಾರಕಿಹೊಳಿ ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಳಯಕ್ಕೆ ಸೇರಿದರಾದ ಸಚಿವ ಕೆಎನ್ ರಾಜಣ್ಣ ಸುದ್ದಿಗಾರರೊಂದಿಗೆ ಮಾತನಾಡಿ, "ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದು. ಪಕ್ಷವು ಡಿಕೆ ಶಿವಕುಮಾರ್ ಅವರನ್ನು ಬದಲಾಯಿಸಲು ನಿರ್ಧರಿಸಿದಾಗ, ನಾನು ಖಂಡಿತವಾಗಿಯೂ ಈ ಹುದ್ದೆಯ ಆಕಾಂಕ್ಷಿ. ಇದಕ್ಕಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ" ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು, "ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ ಮೇಲೆ ಭವಿಷ್ಯದಲ್ಲಿ ವಿಧಾನಸಭೆ, ಪರಿಷತ್ತು ಅಥವಾ ಲೋಕಸಭೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಯಾವ ರಾಜಕೀಯ ಅಧಿಕಾರವೂ ನನಗೆ ಬೇಡ" ಎಂದು ಕೆಎನ್ ರಾಜಣ್ಣ ತಮ್ಮ ಆಕಾಂಕ್ಷೆಯನ್ನು ಮಾಧ್ಯಮಗಳ ಮುಂದಿಟ್ಟಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ವಿರುದ್ಧ ರಾಜಣ್ಣ ಕಿಡಿ
ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆಎನ್ ರಾಜಣ್ಣ ಮಾತನಾಡಿ, ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಪಿತಾಮಹ. ಮಾಧ್ಯಮಗಳ ಮುಂದೆ ಪೆನ್ಡ್ರೈವ್ ವಿಷಯ ಎತ್ತಿದ ಮಾಡಿದ ಮೊದಲ ವ್ಯಕ್ತಿ ಎಚ್ಡಿ ಕುಮಾರಸ್ವಾಮಿ. ಇಂತಹ ಕೆಟ್ಟ ಘಟನೆಯ ನಂತರವೂ ಅವರು ತಮ್ಮ ಪೆನ್ ಡ್ರೈವ್ನ ವಿಷಯವನ್ನು ಬಹಿರಂಗಪಡಿಸಿಲ್ಲ. ಹಾಸನದಲ್ಲಿ ವಿತರಿಸಿದ್ದು ಇದೇ ಪೆನ್ಡ್ರೈವ್ ಎಂದು ಅಂದುಕೊಳ್ಳುವುದು ನ್ಯಾಯೋಚಿತವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)