Mandya: ಕಾಡುಹಂದಿ ದಾಳಿಗೆ ವ್ಯಕ್ತಿ ಬಲಿ; ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

Arun Kumar
0

ಮಂಡ್ಯ : ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಚಿಕ್ಕಯಗಟಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಚಿಂದಗಿರಿದೊಡ್ಡಿ ಗ್ರಾಮದ ಪುಟ್ಟಸ್ವಾಮಿ ಎಂಬುವರ ಮಗ ಶಿವ (48) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಮಂಡ್ಯ-ನಾಗಮಂಗಲ ರಸ್ತೆಯ ಮಾರ್ಗವಾಗಿ ಮಂಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ಕಾಡುಹಂದಿ ದಾಳಿ ಮಾಡಿದೆ. ಕೆಳಗೆ ಬಿದ್ದ ಶಿವು ಎಡ ತೊಡೆ ಮತ್ತು ಮರ್ಮಾಂಗಕ್ಕೆ ಹಂದಿ ಗುದ್ದಿದ ಪರಿಣಾಮ ತೀವ್ರ ರಕ್ತಸ್ತ್ರಾವಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಮೃತ ದೇಹವನ್ನು ಮಿಮ್ಸ್ನ ಶವಾಗಾರಕ್ಕೆ ಸಾಗಿಸಿದರು. ಶವ ಪರೀಕ್ಷೆ ನಡೆಸುವ ವೇಳೆ ಮಿಮ್ಸ್ ಶವಾಗಾರದ ಬಳಿ ಜಮಾಯಿಸಿದ ಮೃತನ ಸಂಬಂಧಿಕರು ಹಾಗೂ ಚಿಂದಗಿರಿದೊಡ್ಡಿ ಸುತ್ತಮುತ್ತಲ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತರಾಟೆಗೆ ತೆಗೆದುಕೊಂಡರು.

ಪರಿಹಾರ ನೀಡಲು ಆಗ್ರಹ
ಅಲೆಮಾರಿ ಸಮುದಾಯಕ್ಕೆ ಸೇರಿದ ಮೃತ ವ್ಯಕ್ತಿಯ ಕುಟುಂಬಕ್ಕೆ ಆಸ್ತಿ ಇಲ್ಲ, ಕೂಲಿ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು, ಆದರೆ ದುರಂತದಲ್ಲಿ ಮನೆ ನಿರ್ವಹಣೆ ಮಾಡುತ್ತಿದ್ದ ಶಿವು ಸಾವನಪ್ಪಿರುವುದರಿಂದ ಕುಟುಂಬ ಬೀದಿಗೆ ಬಿದ್ದಂತಾಗಿದೆ, ಅವರ ಬದುಕು ಮೂರಾಬಟ್ಟೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮೃತನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು, ಕುಟುಂಬದ ಜೀವನ ಭದ್ರತೆಗಾಗಿ ಮೃತರ ಪುತ್ರ ಶ್ರೀನಿವಾಸ್ಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕು, ಮೃತನ ಪತ್ನಿ ಅನಾರೋಗ್ಯ ಪೀಡಿತರಾಗಿದ್ದು ಇವರಿಗೆ ಮಾಸಿಕ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕ ರವಿಕುಮಾರ್ ಭೇಟಿ
ಸುದ್ಧಿ ತಿಳಿದು ಸ್ಥಳಕ್ಕೆ ಶಾಸಕ ರವಿಕುಮಾರ್ ಭೇಟಿ ನೀಡಿ, ಪ್ರತಿಭಟನಾಕರರ ಮನವಿಯನ್ನು ಆಲಿಸಿ ಅರಣ್ಯ ಇಲಾಖೆಯಿಂದ ₹15 ಲಕ್ಷ ಪರಿಹಾರ ನೀಡಲಾಗುವುದು. ಖಾಯಂ ಸರ್ಕಾರಿ ಉದ್ಯೋಗ ನೀಡಲು ಅವಕಾಶ ಇಲ್ಲ ಪರಿಣಾಮ ಯಾವುದಾದರೂ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿದರಲ್ಲದೆ, ವೈಯಕ್ತಿಕವಾಗಿ 50 ಸಾವಿರ ಪರಿಹಾರ ನೀಡಿದ ಬಳಿಕ ಮರಣೋತ್ತರ ಪರೀಕ್ಷೆಗೆ ಅವಕಾಶ ಕಲ್ಪಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)