MLC Election: ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Arun Kumar
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡುತ್ತಿದ್ದು, ಒಂದು ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್ಗೆ ಬಿಟ್ಟುಕೊಟ್ಟಿದೆ.

ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿದ್ದು, ಉಳಿದ ಐದು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡುತ್ತಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಈಶಾನ್ಯ ಪದವೀಧರ ಕ್ಷೇತ್ರ - ಅಮರನಾಥ ಪಾಟೀಲ್
ನೈರುತ್ಯ ಪದವೀಧರ ಕ್ಷೇತ್ರ - ಡಾ. ಧನಂಜಯ ಸರ್ಜಿ
ಬೆಂಗಳೂರು ಪದವೀಧರ ಕ್ಷೇತ್ರ - ಎ. ದೇವೆಗೌಡ
ಆಗ್ನೇಯ ಶಿಕ್ಷಕರ ಕ್ಷೇತ್ರ - ವೈ. ಎ. ನಾರಾಯಣ ಸ್ವಾಮಿ
ದಕ್ಷಿಣ ಶಿಕ್ಷಕರ ಕ್ಷೇತ್ರ - ಇ. ಸಿ. ನಿಂಗರಾಜು

ಬಿಜೆಪಿ ಐದು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜೆಡಿಎಸ್ ಶೀಘ್ರದಲ್ಲೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಿದೆ. ಎಸ್ ಎಲ್ ಬೋಜೇಗೌಡ ಜೆಡಿಎಸ್ನಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.

ಈಶಾನ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3 ರಂದು ಚುನಾವಣೆ ನಡೆಯಲಿದೆ. ಮೇ 9 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 6 ರಂದು ಫಲಿತಾಂಶ ಘೊಷಣೆಯಾಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)