ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ. ಸತತ ಮೂರನೇ ಬಾರಿಗೆ ಈ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈಗಾಗಲೇ ಸ್ಪರ್ಧಿಸಿರುವ ಎರಡೂ ಚುನಾವಣೆಗಳಲ್ಲಿ ಗೆಲುವು ದಾಖಲಿಸಿರುವ ಮೋದಿ, ಹ್ಯಾಟ್ರಿಕ್ ಗೆಲುವಿನ ಕನಸಿನೊಂದಿಗೆ ನಾಮ ಪತ್ರ ಸಲ್ಲಿಸಿದ್ದಾರೆ.
ಮಂಗಳವಾರ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸುವ ವೇಳೆ ಎನ್ಡಿಎ ಮೈತ್ರಿ ಕೂಟದ ಪ್ರಮುಖ ನಾಯಕರು, ಕೇಂದ್ರದ ಸಚಿವರು ಹಾಗೂ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಥ್ ನೀಡಿದರು. ಈ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಚುನಾವಣಾ ಆಯೋಗಕ್ಕೆ ನೀಡಿದ ಅಫಿಡವಿಟ್ ಅನ್ನು ಪರಿಶೀಲಿಸಿದ ನಂತರ, ಪ್ರಧಾನಿಯವರ ಒಟ್ಟು ಆಸ್ತಿ ಎಷ್ಟು ಎಂಬುದು ಬಹಿರಂಗವಾಗಿದೆ.
ಒಟ್ಟು ಸಂಪತ್ತು ಎಷ್ಟು?
ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 9 ಲಕ್ಷ 12 ಸಾವಿರ ರೂ ಹೂಡಿಕೆ ಮಾಡಿದ್ದಾರೆ. ಅಲ್ಲದೆ ಇವರ ಬಳಿ ನಾಲ್ಕು ಚಿನ್ನದ ಉಂಗುರಗಳಿವೆ. ಈ ಉಂಗುರಗಳ ತೂಕ 45 ಗ್ರಾಂ ಆಗಿದ್ದು, 2 ಲಕ್ಷ 67 ಸಾವಿರದ 750 ರೂಪಾಯಿಯ ಮೌಲ್ಯವನ್ನು ಹೊಂದಿವೆ. ಚುನಾವಣಾ ಆಯೋಗಕ್ಕೆ ನೀಡಿರುವ ಅಫಿಡವಿಟ್ ಪ್ರಕಾರ ಮೋದಿ ಅವರ ಬಳಿ ಮನೆ ಅಥವಾ ಕಾರ್, ಜಮೀನು ಇಲ್ಲ. ಇನ್ನು ಅವರ ಒಟ್ಟು ಆಸ್ತಿ 3 ಕೋಟಿ 2 ಲಕ್ಷ 6 ಸಾವಿರದ 889 ರೂ. ಆಗಿದೆ.
ಚರ ಆಸ್ತಿ ಎಷ್ಟು?
ಪಿಎಂ ಮೋದಿ ಸಲ್ಲಿಸಿದ ಅಫಿಡವಿಟ್ ಪ್ರಕಾರ, 2014 ಮತ್ತು 2019 ರ ನಡುವೆ ಅವರ ಚರ ಆಸ್ತಿಯು ಶೇಕಡಾ 52 ರಷ್ಟು ಹೆಚ್ಚಾಗಿದೆ. ಅವರ ಬಹುತೇಕ ಚರ ಆಸ್ತಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1.27 ಕೋಟಿ ರೂಪಾಯಿಗಳ ಸ್ಥಿರ ಠೇವಣಿ ರೂಪದಲ್ಲಿವೆ. ಅಫಿಡವಿಟ್ನಲ್ಲಿ ತಾವು ಎಷ್ಟು ಆದಾಯ ತೆರಿಗೆ ಪಾವತಿಸಿರುವ ಬಗ್ಗೆಯೂ ಮಾಹಿತಿಯನ್ನು ನೀಡಿದ್ದಾರೆ
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.