ಬೆಂಗಳೂರು, ಮೇ. 05: ದೇಶಾದ್ಯಂತ ಸದ್ದು ಮಾಡುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ಡೇಟ್ ಸಿಕ್ಕಿದೆ. ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಲಿದೆ ಎಂದು ಆಡಳಿತರೂಢ ಕಾಂಗ್ರೆಸ್ ಪಕ್ಷ ಘೋಷಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಈ ಘೋಷಣೆ ಮಾಡಿದ್ದಾರೆ. ಈ ವೇಳೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
"ಕಳೆದ 75 ವರ್ಷಗಳಲ್ಲಿ ಎಂದೂ ನಡೆಯದ ಗಂಭೀರ ಪ್ರಕರಣ ಇದಾಗಿದ್ದು, ನೂರಾರು ಸಂಖ್ಯೆಯಲ್ಲಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ನೆರವು ಘೋಷಿಸಿದ್ದಾರೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅಣ್ಣನ ಮಗ. ನೂರಾರು ಸ್ಪಷ್ಟ ವೀಡಿಯೊಗಳು ಬಹಿರಂಗವಾಗಿ ಹೊರಬಂದ ನಂತರ ಅತ್ಯಾಚಾರ ಮತ್ತು ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದುರು ದಾಖಲಾಗಿದ್ದು, ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.