ಕರ್ನಾಟಕ ಚುನಾವಣಾ ರಾಜಕೀಯದ ಕಾವು ಚಿನ್ನಸ್ವಾಮಿ ಕ್ರೀಡಾಂಗಣಕ್ಕೂ ಹಬ್ಬಿದೆ. ಆರ್ಸಿಬಿ ಅಂದ್ರೆ ಮೊದಲು ನೆನಪಾಗೋದು ತಂಡದ ಅಭಿಮಾನಿಗಳು. 16 ವರ್ಷದಿಂದ ಕಪ್ ಗೆಲ್ಲದೇ ಇದ್ದರೂ, ಅಭಿಮಾನಿಗಳ ಪ್ರೀತಿ ಮಾತ್ರ ಒಂಚೂರು ಕಡಿಮೆಯಾಗಿಲ್ಲ, ತಂಡಕ್ಕೆ ಸಿಗೋ ಬೆಂಬಲ ನೋಡಿ ಆಟಗಾರರೇ ಅಚ್ಚರಿಗೊಂಡಿರುವ ಎಷ್ಟೋ ನಿದರ್ಶನಗಳಿವೆ.
ಎದುರಾಳಿ ತಂಡಗಳೂ ಕೂಡ ಆರ್ ಸಿಬಿ ತಂಡದ ಅಭಿಮಾನಿಗಳನ್ನು ಕೊಂಡಾಡುತ್ತಾರೆ. ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಒಂದಿಷ್ಟು ವಿದ್ಯಮಾನಗಳು ಜೆಡಿಎಸ್ಗೆ ಮುಜುಗರ ತಂದಿಕ್ಕಿವೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ವಿಚಾರ ಜೆಡಿಎಸ್ಗೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಹೆಚ್ಡಿ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ ಬಲೆ ಬೀಸಿದ್ದು, ಲುಕ್ಔಟ್ ನೋಟಿಸ್ ಕೂಡ ಜಾರಿ ಮಾಡಿದೆ.
ಬೆಂಬಲಕ್ಕೆ ನಿಂತ ಕಾರ್ಯಕರ್ತರು
ಜೆಡಿಎಸ್ ಪಕ್ಷಕ್ಕೆ ರಾಷ್ಟ್ರಮಟ್ಟದಲ್ಲಿ ಮುಜುಗರ ಆಗುತ್ತಿರುವ ಸಂದರ್ಭದಲ್ಲೇ ಪಕ್ಷದ ನಿಷ್ಟಾವಂತ ಕಾರ್ಯಕರ್ತರು, ಬೆಂಬಲಿಗರು ತಂಡದ ಜೊತೆ ನಿಂತಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೂಡ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ತಾವು ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟುಕೊಡಲ್ಲ ಎನ್ನುವ ಸಂದೇಶ ನೀಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಅಭಿಮಾನಿಗಳು, ಜೆಡಿಎಸ್ ಬೆಂಬಲಿಸುವ ಬ್ಯಾನರ್ ಪ್ರದರ್ಶನ ಮಾಡಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.