Rohit Sharma: ಟಿ20 ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಭಾರೀ ಹಿನ್ನಡೆ ಸಾಧ್ಯತೆ; ರೋಹಿತ್ ಶರ್ಮಾ ಆಡುವುದು ಡೌಟ್‌!

Arun Kumar
0

ಐಸಿಸಿ ಪುರುಷರ ಟಿ20 ವಿಶ್ವಕಪ್ 2024ರ ಟೂರ್ನಿ ಜೂನ್ 1 ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಅಭಿಮಾನಿಗಳಿಗೆ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಶುಕ್ರವಾರ ಮೇ 3 ರಂದು ಐಪಿಎಲ್ 2024ರ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ಕೋಲ್ಕತ್ತಾ ನೈಟ್ ರೈಡರ್ಸ್ 12 ವರ್ಷಗಳ ಬಳಿಕ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗೆಲುವು ಸಾಧಿಸಿದೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುವ 11ರ ಭಾಗವಾಗಿರಲಿಲ್ಲ.

ರೋಹಿತ್ ಅವರ ಬೆನ್ನಿನ ನೋವಿನಿಂದ ಆಡುವ 11ರ ಬಳಗದಿಂದ ಹೊರಗುಳಿದಿದ್ದರು. ರೋಹಿತ್ ಅವರು ಬೆನ್ನು ನೋವು ಮತ್ತು ಬಿಗಿತದಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಮೈದಾನದಲ್ಲಿ ಫೀಲ್ಡಿಂಗ್ ಮಾಡಲು ಸಾಧ್ಯವಾಗಲಿಲ್ಲ. ಆದರೂ ರೋಹಿತ್ ಮುಂಬೈ ಪರ ಇನ್ನಿಂಗ್ಸ್ ಆರಂಭಿಸಲು ಬಂದರು. ಆದರೆ ರೋಹಿತ್ ಶರ್ಮಾ ಅವರಿಂದ ಹೆಚ್ಚು ರನ್ ಗಳಿಸಲು ಸಾಧ್ಯವಾಗದೆ ಕೇವಲ 12 ಎಸೆತಗಳಲ್ಲಿ 1 ಸಿಕ್ಸರ್ ನೆರವಿನಿಂದ 11 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಹೀಗಾಗಿ ಮುಂದಿನ ಪಂದ್ಯದಲ್ಲಿ ಮುಂಬೈ ಪರ ರೋಹಿತ್ ಶರ್ಮಾ ಕಣಕ್ಕೀಳಿಯುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ

ಈ ಬಗ್ಗೆ ಪಿಯೂಷ್ ಚಾವ್ಲಾ ಹೇಳಿದ್ದೇನು? :
ಮುಂಬೈನ ಅನುಭವಿ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರು ರೋಹಿತ್ ಬೆನ್ನು ನೋವಿನಿಂದ ಬಳಲುತ್ತಿರುವ ಬಗ್ಗೆ ಬಹಿರಂಗಪಡಿಸಿದ್ದಾರೆ. ಕೆಕೆಆರ್ ವಿರುದ್ಧ ಪಂದ್ಯದ ನಂತರ ರೋಹಿತ್ ಶರ್ಮಾ ಅವರ ಬೆನ್ನಿನಲ್ಲಿ ನೋವು ಕಾಣಿಸಿಕೊಂಡಿದೆ. ಆದ್ದರಿಂದ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

ಫೆಬ್ರವರಿ-ಮಾರ್ಚ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯ ಸಂದರ್ಭದಲ್ಲಿ ರೋಹಿತ್ ಶರ್ಮಾ ಬೆನ್ನುಮೂಳೆಯ ಸಮಸ್ಯೆಗಳನ್ನು ಎದುರಿಸಿದ್ದರು. ಧರ್ಮಶಾಲಾ ಟೆಸ್ಟ್ನ ಮೂರನೇ ದಿನದಂದು ಬೆನ್ನು ನೋವಿನ ಕಾರಣ ರೋಹಿತ್ ಶರ್ಮಾ ಮೈದಾನದಿಂದ ಹೊರಗುಳಿದಿದ್ದರು ಎಂದು ತಿಳಿಸಿದ್ದಾರೆ.

ರೋಹಿತ್ ಶರ್ಮಾ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ಭಾರತಕ್ಕೆ ಬಹಳ ಮಹತ್ವದ್ದಾಗಿದೆ. 2022ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿತು. ನಂತರ ರೋಹಿತ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತು.

ಇದೀಗ ಮತ್ತೊಮ್ಮೆ ರೋಹಿತ್ ನಾಯಕತ್ವದಲ್ಲಿ 2024ರ ಟಿ20 ವಿಶ್ವಕಪ್ ಗೆಲ್ಲಲು ತಂಡ ಬಯಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಸಂಪೂರ್ಣ ಫಿಟ್ ಆಗಿರುವುದು ತಂಡಕ್ಕೆ ಹಾಗೂ ದೇಶದ ಕ್ರಿಕೆಟ್ ಅಭಿಮಾನಿಗಳಿಗೆ ಬಹಳ ಮುಖ್ಯವಾಗಿದೆ.


Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)