Shakti scheme: ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೂ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎಷ್ಟು ಕೋಟಿ?

Arun Kumar
0

Shakti Scheme: ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಜಾರಿಗೆ ತರಲಾದ ಪ್ರಮುಖ 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಲೇ ಇದೆ. ಹಾಗಾದರೆ ಈ ಯೋಜನೆ ಜಾರಿಯಾದಗಿನಿಂದಲೂ ಈವರೆಗೂ ಎಷ್ಟು ಕೋಟಿ ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾಗಿ 10 ತಿಂಗಳು ಕಳೆದಿದ್ದು, ಏಪ್ರಿಲ್ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC, NWKSRTC, KKRTC, BMTC) ನಾಲ್ಕು ನಿಗಮಗಳ ಬಸ್ಗಳಲ್ಲಿ ಬರೊಬ್ಬರಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯ ಸರ್ಕಾರ 2023ರ ಜೂನ್ 11ರಿಂದ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದ್ದು, ಈ ಯೋಜನೆ ಅಡಿಯಲ್ಲಿ ಮಹಿಳೆಯರು ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, 30-06-2023ರವರೆಗೆ ನಾಲ್ಕು ಸಾರಿಗೆ ನಿಗಮಗಳಲ್ಲಿ 10,54,45,047 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್ ಮೌಲ್ಯ 248,30,13,266 ರೂಪಾಯಿ ಆಗಿದೆ ಎಂದು ತಿಳಿದುಬಂದಿದೆ.

ದಿನಾಂಕ ಜೂಲೈ 01, 2023ರಿಂದ 31-07-2023ರವರೆಗೆ 19,63,00,625 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರೇ, ದಿನಾಂಕ 01-08-2023ರಿಂದ 31-08-2023ರವರೆಗೆ 20,03,60,680 ಮಹಿಳೆಯರು, ದಿನಾಂಕ 01-09-2023ರಿಂದ 30-09-2023ರವರೆಗೆ 18,95,49,754 ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದಾಗಿ ಅಂಕಿ ಅಂಶದ ಮಾಹಿತಿ ನೀಡಿದೆ.

ದಿನಾಂಕ 01-10-2023ರಿಂದ 31-10-2023ರವರೆಗೆ 18,26,17,460 ಮಹಿಳೆಯರು, 01-11-2023ರಿಂದ 30-11-2023ರವರೆಗೆ 18,25,74,439 ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಗಳಲ್ಲಿ ಸಂಚರಿಸಿದ್ದಾರೆ. ದಿನಾಂಕ 01-12-2023ರಿಂದ 31-12-2023ರವರೆಗೆ 19,55,52,662 ಮಹಿಳೆಯರು, ದಿನಾಂಕ 01-01-2024ರಿಂದ 31-01-2024ರವರೆಗೆ 19,26,34,708 ಮಹಿಳೆಯರು ಉಚಿತವಾಗಿ ನಾಲ್ಕು ಸಾರಿಗೆ ನಿಗಮಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆಯಾಗಿ ದಿನಾಂಕ 11-06-2023ರಿಂದ 01-05-2023ರವರೆಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ 60,52,88,107 ಮಹಿಳೆಯರು, ಬಿಎಂಟಿಸಿ ಬಸ್ನಲ್ಲಿ 63,61,69,156 ಮಹಿಳೆಯರು, NWKSRTC ಬಸ್ಗಳಲ್ಲಿ 46,59,20,579 ಮಹಿಳೆಯರು, KKRTS ಬಸ್ಗಳಲ್ಲಿ 29,70,02,860 ಸೇರಿದಂತೆ ಒಟ್ಟು 200,43,80,702 ಮಹಿಳೆಯರು ಉಚಿತವಾಗಿ ಶಕ್ತಿ ಯೋಜನೆಯ ಡಿಯಲ್ಲಿ ಸಂಚರಿಸಿದ್ದಾರೆ. ಇನ್ನು ಇದರ ಒಟ್ಟು ಟಿಕೆಟ್ ಮೊತ್ತ 4836,72,74,251 ರೂಪಾಯಿ ಆಗಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)