SSLC Exam Results: ಬಿಬಿಎಂಪಿ ವ್ಯಾಪ್ತಿಯ ಪ್ರೌಢ ಶಾಲಾ ವಿದ್ಯಾರ್ಥಿಗಳ ಸಾಧನೆ

Arun Kumar
0

ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು SSLC ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಿದೆ. ಇದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮಹತ್ವದ ಸಾಧನೆ ಮಾಡಿದ್ದಾರೆ.

ಹೌದು, ಪ್ರಸಕ್ತ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಾರೆ

ಬಿಬಿಎಂಪಿ ವ್ಯಾಪ್ತಿಯ ಎಲ್ಲ ಶಾಲೆಗಳು ಈ ವರ್ಷ ಶೇಕಡಾ 68.78% ರಷ್ಟು ಅಂಕಗಳಿಸಿದ್ದಾರೆ. ಈ ವರ್ಷ ಒಟ್ಟು 2502 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1721 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆಚ್ಚು ಅಂಕ ಗಳಿಸಿದ ಬಿಬಿಎಂಪಿ ಶಾಲೆಗಳು ಇವು
* ಬಿಬಿಎಂಪಿ ಮತ್ತಿಕೆರೆ ಬಾಲಕಿಯರ ಪ್ರೌಢಶಾಲೆಯು ಶೇಕಡಾ 92.78 ಫಲಿತಾಂಶ ಪಡೆದಿದೆ. ಈ ಮೂಲಕ ಶಾಲೆ ಬಾಲಕಿಯರು ಅಗ್ರಸ್ಥಾನ ಪಡೆದು ಬಿಬಿಎಂಪಿಗೆ ಕೀರ್ತಿ ತಂದಿದ್ದಾರೆ.

* ಬಿಬಿಎಂಪಿ ಭೈರವೇಶ್ವರ ನಗರ ಪ್ರೌಢಶಾಲೆಯು ಶೇಕಡಾ 91.98 ಫಲಿತಾಂಶವನ್ನು ನೀಡಿ ಎರಡನೇ ಸ್ಥಾನ ಪಡೆದಿದೆ.

* ಬಿಬಿಎಂಪಿ ಹೇರೋಹಳ್ಳಿ ಪ್ರೌಢಶಾಲೆಯು ಶೇಕಡಾ 90.56 ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿದೆ.

* 2023-24ನೇ ಸಾಲಿನಲ್ಲಿ ಒಟ್ಟು 66 ವಿದ್ಯಾರ್ಥಿಗಳು ಶೇಕಡಾ 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)