ಬೆಂಗಳೂರು, ಮೇ 26: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಹೀಗಾಗಿ ಅರ್ಹ ಅರ್ಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕು.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದಲ್ಲಿ ಒಂದು ಡೆಪ್ಯುಟಿ ಡೈರೆಕ್ಟರ್ ಹುದ್ದೆ ಖಾಲಿ ಇದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ರಾಜಧಾನಿ ಬೆಂಗಳೂರಿನಲ್ಲಿ ಕೆಲಸ ಪಡೆದುಕೊಳ್ಳಬಹುದು. ಆಪ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಅರ್ಜಿ ಸಲ್ಲಿಕೆ ಮುನ್ನ ನೇಮಕಾತಿ ಪೂರ್ಣ ಮಾಹಿತಿ ತಿಳಿಯಿರಿ.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಹುದ್ದೆ ಹೆಸರು: ಉಪ ನಿರ್ದೇಶಕ ಹುದ್ದೆ
ಖಾಲಿ ಹುದ್ದೆ: ಒಂದು
ಪೊಸ್ಟಿಂಗ್ : ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನ: ನಾಳೆ ಮೇ 27.
ಮಾಸಿಕ ವೇತನ: ಗರಿಷ್ಠ 2,08,700 ರೂ.
ವಯೋಮಿತಿ ವಿವರ
ಈ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು ನಾಳೆ ಸೋಮವಾಋ ಮೇ 27ಕ್ಕೆ ಗರಿಷ್ಠ 56 ವರ್ಷ ದಾಟಿರಬಾರದು. ಇನ್ನೂ ಜಾತಿ ಮೀಸಲಾತಿ ಅನುಗುಣವಾಗಿ ಆಯಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಿಗಲಿದೆ ಎಂಧು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ನಂತರದಲ್ಲಿ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆ ಆಗುವವರಿಗೆ ಮಾಸಿಕ ₹ 67,700 ರಿಂದ 2,08,700 ವರೆಗೆ ವೇತನ ನೀಡಿ ಬೆಂಗಳೂರಿನಲ್ಲಿ ಪೊಸ್ಟಿಂಗ್ ನೀಡಲಾಗುವುದು ಎಂದು ಪ್ರಾಧಿಕಾರದ ಅಧಿಸೂಚನೆ ತಿಳಿಸಿದೆ.
ಅರ್ಜಿ ಸಲ್ಲಿಕೆ ಹೇಗೆ? ವಿಳಾಸ ಮಾಹಿತಿ
ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳು ನಕಲು ಪ್ರತಿ ಸಮೇತವಾಗಿ ಈ ವಿಳಾಸ ''ನಿರ್ದೇಶಕರು (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಪ್ರಾದೇಶಿಕ ಕಚೇರಿ, 3 ನೇ ಮಹಡಿ ಸೌತ್ ವಿಂಗ್, ಖನಿಜ ಭವನ, ನಂ.49, ರೇಸ್ ಕೋರ್ಸ್ ರಸ್ತೆ, ಬೆಂಗಳೂರು- 560001'' ಇಲ್ಲಿಗೆ ಕಳುಹಿಸಬೇಕು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.