ಬೆಳಗಾವಿ, ಮೇ 21: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಬೇಕು ಎಂಬ ಕುಂದಾ ನಗರಿ ಬೆಳಗಾವಿ ಜನರ ಬೇಡಿಕೆ ಈಡೇರಿಲ್ಲ. ರೈಲಿನ ಪ್ರಾಯೋಗಿಕ ಸಂಚಾರ ನಡೆದು ಆರು ತಿಂಗಳು ಕಳೆದಿದೆ. ಆದರೆ ರೈಲು ಸೇವೆ ಇನ್ನೂ ಆರಂಭವಾಗಿಲ್ಲ.
ರೈಲು ಗಾಡಿ ಎಂಬ ಟ್ವೀಟ್ ಖಾತೆಯಲ್ಲಿ ಹಲವು ಪೋಸ್ಟ್ಗಳ ಮೂಲಕ ಕೇಂದ್ರ ರೈಲ್ವೆ ಇಲಾಖೆಯನ್ನು ಪ್ರಶ್ನೆ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಸೇವೆ ಯಾವಾಗ ಆರಂಭವಾಗಲಿದೆ ಎಂದು ಪದೇ ಪದೇ ಕೇಳಲಾಗುತ್ತಿದೆ.
ಏಪ್ರಿಲ್ 28ರಂದು ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿದ್ದರು. ಮೋದಿ ಅವರನ್ನು ಆತ್ಮೀಯವಾಗಿ ಬೆಳಗಾವಿಗೆ ಸ್ವಾಗತ ಮಾಡಿ, ಅವರಿಗೆ ಸಹ ವಂದೇ ಭಾರತ್ ರೈಲು ಯಾವಾಗ? ಎಂಬ ಪ್ರಶ್ನೆ ಮುಂದಿಡಲಾಗಿತ್ತು.
ಪ್ರಾಯೋಗಿಕ ಸಂಚಾರ ಯಶಸ್ವಿ: ಮಂಗಳವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ, "ನರೇಂದ್ರ ಮೋದಿ ಜೀ ಇಂದು ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ನಡೆದು 6 ತಿಂಗಳು ಕಳೆಯಿತು. ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಇನ್ನೂ ರೈಲು ಸಂಚಾರಕ್ಕೆ ಒಪ್ಪಿಗೆ ಕೊಟ್ಟಿಲ್ಲ" ಎಂದು ಟ್ವೀಟ್ ಮಾಡಿ, ಗಮನ ಸೆಳೆಯಲಾಗಿದೆ.
ಸದ್ಯ ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವೆ ಸಂಚಾರ ನಡೆಸುತ್ತಿರುವ ರೈಲು ನಂಬರ್ 20661/ 20662 ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ಅನುಮೋದನೆ ಸಿಕ್ಕಿದೆ.
ರೈಲು ಓಡಿಸಲು ಪೂರ್ವಭಾವಿಯಾಗಿ 2023ರ ನವೆಂಬರ್ 21ರಂದು ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನಡೆಸಲಾಗಿತ್ತು. ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದ್ದರೂ ಸಹ ರೈಲು ಸೇವೆ ಇನ್ನೂ ಆರಂಭಗೊಂಡಿಲ್ಲ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.