Water Shutdown: ಬೆಂಗಳೂರಲ್ಲಿ ಕಾವೇರಿ ನೀರು ಪೂರೈಕೆ ವ್ಯತ್ಯಯ: ಯಾವಾಗ? ಯಾವ ಏರಿಯಾಗಳಲ್ಲಿ? ತಿಳಿಯಿರಿ

Arun Kumar
0

ಬೆಂಗಳೂರು, ಮೇ 04: ಬೆಂಗಳೂರಿನಲ್ಲಿ ನೀರಿನ ಕೊರತೆ ಮಧ್ಯೆ ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾಹಿತಿ ನೀಡಿದೆ.

ಹೌದು, ತುರ್ತು ಕಾಮಗಾರಿ ಕೈಗೊಳ್ಳಲಿರುವ ಪ್ರಯುಕ್ತ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮೇ 08ರಂದು ಬುಧವಾರ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಕಾವೇರಿ 5ನೇ ಹಂತದ ಯೋಜನೆಯ ಸಿಪಿ 04 ಕಾಮಗಾರಿಯಡಿ ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ ವಿದ್ಯುತ್ ಸಂಬಂಧಿತ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಮೇ 08 ರಂದು ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ 5 ಹಂತದ ಜಲರೇಚಕ ಯಂತ್ರಗಾರಗಳನ್ನು 01 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ.

ಈ ಮೇಲಿನ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳುವ ಪರಿಣಾಮ ಬೆಂಗಳೂರಿಗರು ಅವಲಂಬಿತವಾಗಿರುವ ಕಾವೇರಿ ಕುಡಿಯುವ ನೀರು ಸರಬರಾಜಿನಲ್ಲಿ ಶೇ.5ರಷ್ಟು ವ್ಯತ್ಯಯವಾಗಲಿದೆ. ಆದ್ದರಿಂದ ಕಾವೇರಿ 5ನೇ ಹಂತದ ಯೋಜನೆಯ ಹಾರೋಹಳ್ಳಿ ಮತ್ತು ತಾತಗುಣಿ ಪಂಪಿಂಗ್ ಘಟಕ ವ್ಯಾಪ್ತಿಯಿಂದ ಪೂರೈಕೆ ಆಗುತ್ತಿದ್ದ ಬಡಾವಣೆಗಳಲ್ಲಿ ನೀರು ಪೂರೈಕೆಯಲ್ಲಿ ತೊಂದರೆ ಆಗಲಿದೆ.

ಈ ಕುರಿತು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು, ನೀರು ಪೂರೈಕೆ ಕೊರತೆ ಎದುರಿಸುವ ನಗರವಾಸಿಗಳು ಜಲಮಂಡಳಿಗೆ ಸಹಕರಿಸಬೇಕು ಎಂದು ಪ್ರಟಕಣೆಯಲ್ಲಿ ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)