Weather Update: ಬೆಂಗಳೂರು, ತುಮಕೂರು ಸೇರಿ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

Arun Kumar
0

ಅಂತೂ ಇಂತೂ ರಾಜ್ಯದಲ್ಲಿ ಮಳೆ ಶುರುವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ನೆಮ್ಮದಿ ಸಿಕ್ಕಂತಾಗಿದೆ. ಕಳೆದ ಮೂರು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಬುಧವಾರ ಮಧ್ಯಾಹ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಶುರುವಾಗಿತ್ತು, ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದೆ. ಬುಧವಾರ ರಾತ್ರಿ ಹಲವು ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ ಮತ್ತು ತುಮಕೂರಿನಲ್ಲಿ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ
ಬೆಂಗಳೂರಿನಲ್ಲಿ ಬುಧವಾರ ಆಲಿಕಲ್ಲು ಸಹಿತ ವ್ಯಾಪಕ ಮಳೆಯಾಗಿದ್ದು, ಇಡೀ ನಗರ ತಂಪಾಗಿದೆ. ಬಿಸಿಲು, ಸೆಖೆಯಿಂದ ಕಂಗೆಟ್ಟಿದ್ದ ಜನಕ್ಕೆ ಇಂದು ಹಾಯೆನಿಸಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾದ ಕಾರಣ, ನಗರದಲ್ಲಿ ಹಲವು ಕಡೆ ಮರ ಮುರಿದು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ವಾಹನ ಸಂಚಾರರು ಪರದಾಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)