ದೇಶದಲ್ಲಿ 400 ಸ್ಥಾನ ಬಿಜೆಪಿ ಗೆಲುವು; ಕರ್ನಾಟಕದಲ್ಲಿ BJP ಗೆಲ್ಲುವ ಸ್ಥಾನಗಳೆಷ್ಟು? ಮಾಜಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ

Arun Kumar
0

ಹಾವೇರಿ,ಜೂನ್ 03: ಇಡೀ ದೇಶದಲ್ಲಿ 400 ಕ್ಕೂ ಸ್ಥಾನ ಬಿಜೆಪಿ ಗೆಲುವು ಸಾಧಿಸಲಿದೆ. ಲೋಕಸಭಾ ಚುನಾವಣೆಯಲ್ಲಿ ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ, ರಾಜ್ಯದಲ್ಲಿ ಬಿಜೆಪಿ 25 ಸೀಟ್ ಗೇಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿಯು ರಾಜಕಾರಣ ಬದಲಾವಣೆಯಾಗಲಿದೆ. ರಾಜ್ಯ ಸರ್ಕಾರ ಬದಲಾವಣೆಗೆ ನಂಬರ್ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ. ಇಂದಿರಾಗಾಂಧಿ ದೇವರಾಜ್ ಅರಸ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಆರ್. ಗುಂಡುರಾವ್ ಕಡೆಗೆ ಹೋದರು ಎಂದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಸೀಟ್ ಗೇಲ್ಲುತ್ತೇವೆ. ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿ ಆದ ಬಳಿಕ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ.

ಸರ್ಕಾರ ವಜಾ ಮಾಡಲು ಆಗ್ರಹ: ಪಿ.ರಾಜೀವ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ 6ನೇ ತಾರೀಕಿನ ಒಳಗೆ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುವಲ್ಲಿ ವಿಳಂಬ ನೀತಿ ಅನುಸರಿಸಿದರೆ, 6ರಂದು ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ರಾಜಭವನಕ್ಕೆ ತೆರಳುತ್ತೇವೆ. ಅಲ್ಲದೆ, ರಾಜ್ಯ ಸರಕಾರವನ್ನು ವಜಾ ಮಾಡಲು ಒತ್ತಾಯಿಸುತ್ತೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಎಚ್ಚರಿಸಿದ್ದಾರೆ.

ಜೂನ್ 6 ರಂದು ಬಿಜೆಪಿ ನಿಯೋಗವು ಈ ಸಂಬಂಧ ರಾಜ್ಯಪಾಲರನ್ನು ಒತ್ತಾಯಿಸಲಿದೆ ಎಂದು ತಿಳಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಸಮಾಜದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ. ಇದು ಮುಖ್ಯಮಂತ್ರಿಗಳ ಮೂಗಿನ ಅಡಿಯಲ್ಲಿ ನಡೆದ ಅಕ್ರಮವಾದ ವರ್ಗಾವಣೆ ಎಂದು ಆರೋಪಿಸಿದರು.

ಆರ್ಥಿಕ ಇಲಾಖೆಯ ಸಹಮತ ಇಲ್ಲದೇ ಇಷ್ಟು ದೊಡ್ಡ ಮೊತ್ತ ವರ್ಗಾವಣೆ ಆಗಲು ಸಾಧ್ಯವಿಲ್ಲ. ಚುನಾವಣೆಗಾಗಿ ತೆಲಂಗಾಣಕ್ಕೆ ಕರ್ನಾಟಕದ ಪರಿಶಿಷ್ಟ ಪಂಗಡದವರ ಹಣ ವರ್ಗಾಯಿಸಿದ ಆರೋಪ ಇದೆ. ಕೂಡಲೇ ನಾಗೇಂದ್ರ ಅವರ ರಾಜೀನಾಮೆ ಪಡೆಯಲು ಈ ಸರಕಾರವನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯ ಮಾಡಿ ಗಡುವನ್ನು ನೀಡಿದ್ದೇವೆ ಎಂದು ತಿಳಿಸಿದರು.

ಖಜಾನೆ 2ರಿಂದ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಹೋಗಬೇಕಿತ್ತು. ಅದು ಹೇಗೆ ನಿಗಮಕ್ಕೆ ವರ್ಗಾವಣೆ ಆಗಿದೆ? ಆರ್ಥಿಕ ಇಲಾಖೆ ಅಧಿಕಾರಿಗಳು ಹೇಗೆ ಶಾಮೀಲಾದರು? ಆರ್ಥಿಕ ಇಲಾಖೆ ಅಧಿಕಾರಿಗಳು ಯಾರ ಸೂಚನೆ ಮೇರೆಗೆ ಈ ವರ್ಗಾವಣೆ ಮಾಡಿದ್ದಾರೆ? ಈ ಅಕ್ರಮ ವರ್ಗಾವಣೆಯ ಮಸಿ ಸಿದ್ದರಾಮಯ್ಯನವರಿಗೂ ಕೂಡ ಬಳಿದುಕೊಂಡಿದೆ ಎಂದು ಪಿ.ರಾಜೀವ್ ಅವರು ಆರೋಪಿಸಿದರು.

ಎಸ್ಐಟಿಯಿಂದ ಈ ಮಸಿ ಒರೆಸಿಕೊಳ್ಳಲು ಸಾಧ್ಯವೇ? ನಿಮ್ಮ ಅಧೀನದಲ್ಲಿರುವ ಅಧಿಕಾರಿಗಳು ನಿಮ್ಮನ್ನು ಕರೆದು ವಿಚಾರಣೆ ಮಾಡಲು ಸಾಧ್ಯವಿದೆಯೇ? ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ಸಿಎಂ ಅವರು ಈ ಹಗರಣದ ಪಾಲುದಾರ ತಾವಲ್ಲ ಎಂದು ರಾಜ್ಯದ ಜನತೆಗೆ ತೋರಿಸಲು ಈ ಪ್ರಕರಣವನ್ನು ಕೂಡಲೇ ಸಿಬಿಐಗೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.

ಚುನಾವಣೆಗೆ ಬಳಸಲೆಂದೇ ಈ ಹಣವನ್ನು ಕಳಿಸಿದ್ದಾರೆಂದು ಬಲ್ಲ ಮೂಲಗಳಿಂದ ಮಾಹಿತಿ ಲಭಿಸಿದೆ. ಹೈಕಮಾಂಡಿಗೆ ಮುಟ್ಟಿಸಲೆಂದೇ ಈ ಹಣವನ್ನು ಬಳಸಲಾಗಿದೆ. ಮಾನ್ಯ ಮುಖ್ಯಮಂತ್ರಿಗಳ ನಿಗಾದ ಅಡಿಯಲ್ಲಿ ಈ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಸುದ್ದಿ ಹರಿದಾಡುತ್ತಿದೆ ಎಂದು ಅವರು ವಿವರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)