ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಪ್ರಮುಖ ಆರೋಪಿಗಳಾಗಿದ್ದಾರೆ. ಮೊದಲ ಐದು ದಿನಗಳ ಪೊಲೀಸ್ ಕಸ್ಟಡಿಯ ಅವಧಿ ಮುಗಿದಿದ್ದರಿಂದ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಪರ ವಕೀಲರು ತಮ್ಮ ವಾದವನ್ನು ಮಂಡಿಸಿದ್ದರು.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಪ್ರಮುಖ ಆರೋಪಿಗಳಾಗಿದ್ದಾರೆ. ಮೊದಲ ಐದು ದಿನಗಳ ಪೊಲೀಸ್ ಕಸ್ಟಡಿಯ ಅವಧಿ ಮುಗಿದಿದ್ದರಿಂದ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಪರ ವಕೀಲರು ತಮ್ಮ ವಾದವನ್ನು ಮಂಡಿಸಿದ್ದರು.
ಇಷ್ಟೇ ಅಲ್ಲದೆ ರೇಣುಕಾಸ್ವಾಮಿಯನ್ನು ಆರೋಪಿಗಳು ಎಲೆಕ್ಟ್ರಿಕ್ ಶಾಕ್ ನೀಡಿ ಕೊಲೆ ಮಾಡಿದ್ದಾರೆ. ಈ ಡಿಸೈಸ್ಗಳನ್ನು ವಶಕ್ಕೆ ಪಡೆಯಬೇಕಿದೆ. ಆದರೆ, ಆರೋಪಿ ಇನ್ನೂ ಬಾಯಿ ಬಿಟ್ಟಿಲ್ಲ. ಹಾಗೇ ಆರೋಪಿಗಳ 10 ಮೊಬೈಲ್ ವಶಕ್ಕೆ ಪಡೆಯಬೇಕಾಗಿದೆ. ಅದರ ಮಾಹಿತಿಯನ್ನು ಸಂಗ್ರಹಿಸಬೇಕಿದೆ. ಹೀಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೊಡಬೇಕು ಎಂದು ನ್ಯಾಯಾಧೀಶರನ್ನು ಕೇಳಿಕೊಂಡಿದ್ದರು. ಪೊಲೀಸರು 9 ದಿನಗಳ ಕಾಲ ಪೊಲೀಸ್ ಕಸ್ಟಡಿ ಕೇಳಿದ್ದರು. ನ್ಯಾಯಾಧೀಶರು 5 ದಿನಗಳ ಕಾಲ ನೀಡಿದ್ದಾರೆ.
ಹೀಗಾಗಿ ಆರ್ಥಿಕ ಅಪರಾಧಗಳ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿ ನಂ 1 ರಿಂದ ಹಾಗೂ ಆರೋಪಿ ನಂ 7, ಆರೋಪಿ ನಂ 10 ರಿಂದ 14 ಹಾಗೂ ಆರೋಪಿ ನಂ 16ರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ದರ್ಶನ್ ಅಂಡ್ ಗ್ಯಾಂಗ್ಗೆ ಮತ್ತೆ ಸಂಕಷ್ಟು ಎದುರಾಗಿದೆ.
ಈ ವೇಳೆ ಪೊಲೀಸರಿಗೆ ಕೆಲವು ಷರತ್ತುಗಳನ್ನು ನೀಡಲಾಗಿದೆ. ಆರೋಪಿಗಳ ಪರ ವಕೀಲರ ಭೇಟಿಗೆ ಅವಕಾಶ ನೀಡಬೇಕು. ಅವರ ಮೇಲೆ ಯಾವುದೇ ರೀತಿಯ ಹಲ್ಲೆ ನಡೆಸಬಾರದು ಎಂದು ಕೋರ್ಟ್ ಸೂಚನೆಯನ್ನು ನೋಡಿದೆ. ಇಲ್ಲಿ ಆರೋಪಿ ನಂ 1 ಪವಿತ್ರಾ ಗೌಡ, ಆರೋಪಿ ನಂ 2 ದರ್ಶನ್, ಆರೋಪಿ ನಂ 3 ಪವನ್, ಆರೋಪಿ ನಂ 4 ರಾಘವೇಂದ್ರ, ಆರೋಪಿ ನಂ 5 ನಂದೀಶ್, ಆರೋಪಿ ನಂ 6 ಜಗದೀಶ್, ಆರೋಪಿ ನಂ 7, ಆರೋಪಿ ನಂ 10 ವಿನಯ್, ಆರೋಪಿ ನಂ 11 ನಾಗರಾಜು, ಆರೋಪಿ ನಂ 12 ಲಕ್ಷ್ಮಣ್, ಆರೋಪಿ ನಂ 13 ದೀಪಕ್, ಆರೋಪಿ ನಂ 14 ಪ್ರದೋಶ್, ಆರೋಪಿ ನಂ 16 ಕೇಶವಮೂರ್ತಿ ಇವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ 6 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಈ ಬಾರಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು ಎಂಬ ನಿರೀಕ್ಷೆಯಿತ್ತು. ಆದರೆ, ಪೊಲೀಸರು ಮತ್ತಷ್ಟು ಸಮಯಾವಕಾಶವನ್ನು ಕೇಳಿದ್ದರಿಂದ ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಪೊಲೀಸರು ಇವರಿಂದ ಇನ್ನೂ ಒಂದಿಷ್ಟು ಮಾಹಿತಿಯನ್ನು ಇವರಿಂದ ಕಲೆ ಹಾಕಲಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.