ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಜೈಲಿನಿಂದ ಕರೆದುಕೊಂಡು ಹೋದ ಎಸ್‌ಐಟಿ

Arun Kumar
0

ಬೆಂಗಳೂರು, ಜೂನ್ 13: ಹಾಸನದ ಮಾಜಿ ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. 3 ಪ್ರಕರಣಗಳಲ್ಲಿ ಅವರು ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಎಸ್ಐಟಿ ಮತ್ತೆ ಪ್ರಜ್ವಲ್ ರೇವಣ್ಣರನ್ನು ತಮ್ಮ ವಶಕ್ಕೆ ಪಡೆದಿದೆ.

ಜೂನ್ 10ರಂದು ಪ್ರಜ್ವಲ್ ರೇವಣ್ಣರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪೊಲೀಸರು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದರು. ಎಸ್ಐಟಿ ಪೊಲೀಸರು ಬುಧವಾರ ಬಾಡಿ ವಾರೆಂಟ್ ಮೂಲಕ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದುಕೊಂಡು ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

ಮೈಸೂರಿನ ಕೆ. ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ, ಭವಾನಿ ರೇವಣ್ಣ, ರೇವಣ್ಣ ಆಪ್ತ ರಾಜಗೋಪಾಲ್ ಆರೋಪಿಗಳು.

ಎಸ್ಐಟಿ ಅಧಿಕಾರಿಗಳು ಇದೇ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಬಂಧಿಸಿದ್ದರು. ಸದ್ಯ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಕಳೆದ ವಾರ ಎಸ್ಐಟಿ ಕಛೇರಿಯಲ್ಲಿ ಇದೇ ಪ್ರಕರಣದ ಸಂಬಂಧ ಪಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ವಿಚಾರಣೆ ನಡೆದಿತ್ತು.

ಜಾಮೀನು ಅರ್ಜಿ ವಜಾ: ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಮೂರು ಅರ್ಜಿಗಳನ್ನು ವಜಾಗೊಳಿಸಿದೆ.

ವಿದೇಶದಿಂದ ಮೇ 31ರಂದು ಬೆಂಗಳೂರು ನಗರಕ್ಕೆ ಆಗಮಿಸಿದ ಪ್ರಜ್ವಲ್ ರೇವಣ್ಣರನ್ನು ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ಬಂಧಿಸಿತ್ತು. ಪ್ರಜ್ವಲ್ ವಿರುದ್ಧ ಒಟ್ಟು ಮೂರು ಪ್ರಕರಣ ದಾಖಲಾಗಿದ್ದು, ಎಲ್ಲಾ ಪ್ರಕರಣಗಳ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ.
Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)