KSRTC Relief: 4 ನೌಕರ ಕುಟುಂಬಗಳಿಗೆ ತಲಾ 1 ಕೋಟಿ ಪರಿಹಾರ: ಸಾರಿಗೆ ಸಚಿವರು ಕೊಟ್ಟ ಸಲಹೆ ಏನು?

Arun Kumar
0

ಬೆಂಗಳೂರು, ಜೂನ್ 12: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಮೃತಪಟ್ಟ ನೌಕರರ ಅವಲಂಬಿತರಿಗೆ, ಕುಟುಂಬಸ್ಥರಿಗೆ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಬುಧವಾರ ನಾಲ್ಕು ಮೃತರಿಗೆ ತಲಾ 01 ಕೊಟಿ ರೂ. ವಿತರಣೆ ಮಾಡಲಾಯಿತು.

KSRTC ನಿಗಮದ ನೌಕರರ 4 ಅವಲಂಭಿತರಿಗೆ ಅಪಘಾತ ಪರಿಹಾರ (On duty/Off duty) ವಿಮೆ ತಲಾ ರೂ.1 ಕೋಟಿಯಂತೆ ಒಟ್ಟು ಇಲ್ಲಿಯವರೆಗೆ ಇದೂ ಸೇರಿ 17 ಸಿಬ್ಬಂದಿಗಳ ಕುಟುಂಬಕ್ಕೆ ವಿಮಾ ನೀಡಲಾಗಿದೆ. ಸೇವೆಯಲ್ಲಿದ್ದು ಮೃತ ಪಟ್ಟ 39 ನೌಕರರ ಅವಲಂಬಿತರಿಗೆ ತಲಾ ರೂ.10 ಲಕ್ಷ ಪರಿಹಾರ ನೀಡಲಾಗಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.

ನಿಗಮದ ವಾಹನಗಳಲ್ಲಿ ಪ್ರಯಾಣಿಸುವಾಗ ಅಪಘಾತಕ್ಕೊಳಗಾಗಿ ಮೃತರಾದ 04 ಪ್ರಯಾಣಿಕರ ಅವಲಂಭಿತರಿಗೆ ತಲಾ ರೂ.10 ಲಕ್ಷ ಪರಿಹಾರ ವಿಮಾ ಮೊತ್ತ ಒದಗಿಸಲಾಗಿದೆ.

ನಿಗಮ ವ್ಯಾಪ್ತಿಯಲ್ಲಿ ಸಾರಿಗೆ ಸುರಕ್ಷಾ ರೂ. 1 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತರಲಾಗಿದೆ. ಸಿಬ್ಬಂದಿ ಅವಲಂಭಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸಲು ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟ ಅಥವಾ ಅಂಗನ್ಯೂನತೆಗೆ ಒಳಗಾದಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸಲಾಗುತ್ತಿದೆ ಎಂದು KSRTC ಮಾಹಿತಿ ನೀಡಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ
ನೌಕರರಿಗೆ ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಸಾವನ್ನಪುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಈ ಕಾರಣದಿಂದ ಮೃತಪಡುವ ಕುಟುಂಬಸ್ಥರಿಗೆ ಆರ್ಥಿಕವಾಗಿ ನೆರವಾಗಲು ಮೊತ್ತದ ಪರಿಹಾರವನ್ನು ರೂ. 3 ಲಕ್ಷನಿಂದ ರೂ.10 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಹೆಚ್ಚಿಸಲಾದ ಮೊತ್ತವನ್ನು ಇದುವರೆಗೆ ಒಟ್ಟು 16 ಪ್ರಕರಣಗಳಲ್ಲಿ ರೂ.10 ಲಕ್ಷಗಳ ಪರಿಹಾರ ಧನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರ ಕುಟುಂಬಸ್ಥರಿಗೆ ನೆರವು
ನಿಗಮದ ವಾಹನಗಳಲ್ಲಿ ಪ್ರಯಾಣಿಸುತ್ತಿರುವಾಗ ಅಪಘಾತಕ್ಕೊಳಗಾದ ನಾಲ್ವರು ಪ್ರಯಾಣಿಕರ ಅವಲಂಭಿತರಿಗೆ ತಲಾ ರೂ.10 ಲಕ್ಷ ಪರಿಹಾರ ನೀಡಲಾಗಿದೆ. ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಯೋಜನೆ ಜಾರಿಗೆ ತರಲಾಗಿದೆ ಎಂದು ನಿಗಮ ತಿಳಿಸಿದೆ.

ಪರಿಹಾರ ಪೋಲು ಮಾಡದಂತೆ ಸಚಿವರ ಸಲಹೆ
ಪರಿಹಾರ ವಿತರಿಸಿ ಮಾತನಾಡಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಮೃತಪಟ್ಟವರ ಜೀವ ಅಮೂಲ್ಯವಾದದ್ದು. ಯೋಜನೆಯಿಂದ ಬರುವ ಹಣವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ಕಟ್ಟಿಕೊಳ್ಳಲು ಉಪಯೋಗಿಸಿಕೊಳ್ಳಬೇಕು. ಇತರ ಕಾರಣಗಳಿಗೆ ಹಣ ಪೋಲು ಮಾಡದಂತೆ ಅವರು ಎಚ್ಚರಿಕೆ ವಹಿಸಿದರು.

ನಿಗಮ ವ್ಯಾಪ್ತಿಯಲ್ಲಿ ಯೋಜನೆ ಯಶಸ್ವಿಯಾಗಲು ಕಾರಣರಾದ ನಿಗಮದ ಚಾಲಕರು,ನಿರ್ವಾಹಕರು, ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರುಗಳ ಕಾರ್ಯಕ್ಕೆ ಅವರು ಅಭಿನಂದನೆ ತಿಳಿಸಿದರು. ಇನ್ನೂ ನಿಗಮದ ವಿದ್ಯಾ ಚೇತನ ವಿದಾರ್ಥಿ ವೇತನ ಯೋಜನೆಯ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಅವರು ಸೂಚಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)