Narendra Modi: ಸರ್ಕಾರ ರಚನೆಗೆ ನರೇಂದ್ರ ಮೋದಿಗೆ ಆಹ್ವಾನ; ಭಾನುವಾರ ಪ್ರಮಾಣ ವಚನ

Arun Kumar
0

2024ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ರಚನೆ ಸುಗಮವಾಗಿದೆ. ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ. ಸರ್ಕಾರ ರಚನೆ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ.

ಭಾನುವಾರ ಸಂಜೆ 6 ಗಂಟೆಗೆ ತಮ್ಮ ನೂತನ ಸಚಿವ ಸಂಪುಟದ ಸದಸ್ಯರ ಜೊತೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸತತ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಜವಹರಲಾಲ್ ನೆಹರು ಬಳಿಕ ಈ ಸಾಧನೆ ಮಾಡಿದ ಎರಡನೇ ಪ್ರಧಾನಿಯಾಗಲಿದ್ದಾರೆ.

ರಾಷ್ಟ್ರಪತಿ ಭವನದ ಹೇಳಿಕೆಯ ಪ್ರಕಾರ, ದ್ರೌಪದಿ ಮುರ್ಮು ಅವರು "ವಿವಿಧ ಬೆಂಬಲ ಪತ್ರಗಳ ಆಧಾರದ ಮೇಲೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಸರ್ಕಾರ ರಚನೆಗೆ ಬೇಕಾದ ಬೆಂಬಲ ಇರುವುದನ್ನು ಖಚಿತಪಡಿಸಿಕೊಂಡಿದ್ದಾರೆ. 18 ನೇ ಲೋಕಸಭೆ ಮತ್ತು ರಚನೆಗೆ ಬಹುಮತದ ಬೆಂಬಲವಿದ್ದು, ಹಾಗಾಗಿ ನರೇಂದ್ರ ಮೋದಿ ಅವರನ್ನು ಭಾರತದ ಪ್ರಧಾನಿಯನ್ನಾಗಿ ನೇಮಿಸಲಾಗಿದೆ" ಎಂದು ಪ್ರಕಟಣೆ ತಿಳಿಸಿದೆ.

ಸಿಹಿ ಮೊಸರು ತಿನ್ನಿಸಿದ ದ್ರೌಪದಿ ಮುರ್ಮು

ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ರಾಷ್ಟ್ರಪತಿಗಳು ತಮ್ಮ ಭೇಟಿಯ ವೇಳೆ ಮೋದಿ ಅವರಿಗೆ ಸಿಹಿ ಮೊಸರು ತಿನ್ನಿಸಿದರು.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಅವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ ನಂತರ ರಾಷ್ಟ್ರಪತಿಗಳು ಕೇಂದ್ರದಲ್ಲಿ ಸರ್ಕಾರ ರಚಿಸಲು ಮೋದಿ ಅವರನ್ನು ಆಹ್ವಾನಿಸಿದರು.

ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, "ಇಂದು ಬೆಳಿಗ್ಗೆ ಎಲ್ಲಾ ಎನ್ಡಿಎ ಮಿತ್ರಪಕ್ಷಗಳು ನನ್ನನ್ನು ನಾಯಕನನ್ನಾಗಿ ಆಯ್ಕೆ ಮಾಡಿ ರಾಷ್ಟ್ರಪತಿಗಳಿಗೆ ತಿಳಿಸಿದವು. ನಂತರ ರಾಷ್ಟ್ರಪತಿಗಳು ನನ್ನನ್ನು ಕರೆದರು. ಮತ್ತು ನನ್ನನ್ನು ನಿಯೋಜಿತ ಪ್ರಧಾನಿಯಾಗಿ ನೇಮಿಸಿದರು. ನಾನು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ, ಬನ್ನಿ ಎಂದು ಆಹ್ವಾನ ನೀಡಿದರು.

ಮೂರನೇ ಅಧಿಕಾರಕ್ಕೆ ಬರಲು ಮತ ನೀಡಿದ ದೇಶದ ಜನತೆಗೆ ನರೇಂದ್ರ ಮೋದಿ ಧನ್ಯವಾದ ತಿಳಿಸಿದರು. "ಎನ್ಡಿಎಗೆ ಮೂರನೇ ಬಾರಿಗೆ ರಾಷ್ಟ್ರದ ಸೇವೆ ಮಾಡಲು ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಈ ದೇಶದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ದೇಶವನ್ನು ವೇಗವಾಗಿ ಅಭಿವೃದ್ಧಿಪಡಿಸಲು ಬದ್ಧರಾಗಿದ್ದೇವೆ" ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)