ಬೆಂಗಳೂರು, ಜೂನ್ 02: ಪ್ರಸಕ್ತ ಶೈಕ್ಷಣಿಕ ಸಾಲಿನ (2024-25) ಸಾಲಿನ ಶೈಕ್ಷಣಿಕ ವರ್ಷದ ಅವಧಿಗೆ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯಬಹುದಾಗಿದೆ.
ಈ ಕುರಿತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮಾಹಿತಿ ನೀಡಿದರು.
ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿಗೆ ಶಾಲೆಗಳು ಮತ್ತು ಪದವಿಪೂರ್ವ ಕಾಲೆಜು ತರಗತಿಗಳು ಆರಂಭವಾಗಿರುವ ಪ್ರಯುಕ್ತ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ಸಹಯೋಗದಲ್ಲಿ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.
ಸೇವಾ ಸಿಂಧು ಪೂರ್ಟಲ್ ಮೂಲಕ ಅರ್ಜಿ ಸಲ್ಲಿಕೆ
ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು. URL-http://sevasindhuservices.karnataka.gov.in/buspassservices ಮೂಲಕ ಕೂಡಲೇ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಶಾಲಾ-ಕಾಲೇಜು ಶುಲ್ಕ ಪಾವತಿ ರಶೀದಿ, ಘೋಷಣಾ ಪತ್ರ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಸಹಿತ ಅರ್ಜಿ ಸಲ್ಲಿಸಬೇಕು
ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಹುಬ್ಬಳ್ಳಿ-ಧಾರವಾಡ ಇನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳ ಮೂಲಕವೂ ಸಲ್ಲಿಸಬಹುದು. ರೂ.30ಶುಲ್ಕ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಅರ್ಜಿ ಅನುಮೋದನೆಯಾದ ನಂತರ ಪಾಸ್ ಪಡೆಯಲು ಭೇಟಿ ನೀಡಬೇಕಾದ ಕರ್ನಾಟಕ ಒನ್ ಕೇಂದ್ರದ ಮಾಹಿತಿಯನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಸದರಿ ಕೇಂದ್ರದಲ್ಲಿ ನಿಗಧಿತ ಶುಲ್ಕವನ್ನು ಪಾವತಿಸಿ ಬಸ್ ಪಾಸ್ ಪಡೆಯಬಹುದಾಗಿದೆ. ಶುಲ್ಕವನ್ನು ನಗದು,ಕ್ರೆಡಿಟ್ ಕಾರ್ಡ್,ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಪಾಸ್ ವಿತರಣೆ ಕೇಂದ್ರಗಳ ಮಾಹಿತಿ
ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಪಾಸ್ ವಿತರಣೆ ಕೇಂದ್ರಗಳ ಮಾಹಿತಿ ನೋಡುವುದಾದರೆ, ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಹಾಗೂ ಕುಂದಗೋಳ ತಾಲೂಕು- ಕರ್ನಾಟಕ ಒನ್ ಕೇಂದ್ರ, ಕಾಳಿದಾಸ ನಗರ, ಕುಂದಗೋಳ, ಅಣ್ಣಿಗೇರಿ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ,ಟಿ.ಎಂಸಿ.ಹತ್ತಿರ ಅಣ್ಣಿಗೇರಿ, ನವಲಗುಂದ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ, ಅನು ಕಂಪ್ಯೂಟರ್ಸ, ಅನು ಗೃಹ, ಅಕ್ಕಿ ಓಣಿ ನವಲಗುಂದ, ಕಲಘಟಗಿ ತಾಲ್ಲೂಕು- ಕರ್ನಾಟಕ ಒನ್ ಕೇಂದ್ರ, ಪಶು ಆಸ್ಪತ್ರೆ ಹತ್ತಿರ ವಿದ್ಯಾಗಿರಿ, ಕಲಘಟಗಿ ಇಲ್ಲಿ ವಿತರಣೆ ಮಾಡಲಾಗುತ್ತದೆ
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.