Price Hike: 'ಬೆಲೆ ಏರಿಕೆ ಭಾಗ್ಯ ಕೊಟ್ಟಿದೆ' ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ಪ್ರತಿಭಟನೆಗೆ ಕರೆ

Arun Kumar
0

ಬೆಂಗಳೂರು ಜೂನ್ 16: ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗುತ್ತಿದ್ದಂತೆ ವಿರೋಧ ಪಕ್ಷ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶಗೊಂಡಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಇಂದು ಪ್ರತಿಭಟನೆ ಕುರಿತು ಸುದ್ದಿಗೋಷ್ಠಿ ನಡೆಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಭಾಗ್ಯ ಕೊಟ್ಟಿದೆ ಎಂದು ಆರ್ ಅಶೋಕ್ ಅವರು ಆರೋಪಿಸಿದರು.

ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ. ಪೆಟ್ರೋಲ್ ಬೆಲೆಯೇರಿಕೆ ಮಾಡಿರುವ ರಾಜ್ಯ ಸರ್ಕಾರ, ಹಣಕ್ಕಾಗಿ ಕಾರ್ಪೊರೇಷನ್ ಹಾಗೂ ಯುಟಿಲಿಟಿ ಬಿಲ್ಡಿಂಗ್ಅನ್ನು ಅಡಮಾನ ಇಡಲು ಸಜ್ಜಾಗಿದೆ ಎಂದು ಆರ್.ಅಶೋಕ್ ಆರೋಪಿಸಿದರು.

ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜೂನ್ 17) ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಮಾಡಲು ಮುಂದಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿದೆ. ಇದು ಜನಸಾಮಾನ್ಯರ ಹೊರೆಯಾಗಲಿದೆ. ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಂಡಂತೆ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಒಂದು ಲೀಟರ್ ಪೆಟ್ರೋಲ್ಗೆ 3 ರೂ. ಹಾಗೂ ಡೀಸೆಲ್ಗೆ 3.5 ರೂ. ಏರಿಕೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯು ಬೆಲೆಯೇರಿಕೆ ಅಸ್ತ್ರ ಪ್ರಯೋಗಿಸುತ್ತಿದೆ.

ಬಿಜೆಪಿ ಸರ್ಕಾರ ಇದ್ದಾಗ ನಾವು ತೆರಿಗೆ ಕಡಿಮೆ ಮಾಡಿದ್ದೆವು. ನಮ್ಮ ತೆರಿಗೆ, ನಮ್ಮ ಹಕ್ಕು ಎಂದೆಲ್ಲ ಹಾರಾಡಿದ ಕಾಂಗ್ರೆಸ್ ಈಗ ಬೆಲೆಯೇರಿಕೆ ಮಾಡಿದೆ. ಕರ್ನಾಟಕದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಿರುವ ಕಾರಣ ಸಿದ್ದರಾಮಯ್ಯ ಅವರು ಜನರಿಗೆ ಬೆಲೆಯೇರಿಕೆಯ ಬರೆ ಎಳೆಯಲು ಮುಂದಾಗಿದ್ದಾರೆ ಎಂಬುದಾಗಿ ಆರ್. ಅಶೋಕ್ ಬೇಸರ ವ್ಯಕ್ತಪಡಿಸಿದರು.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಲು ಕಾರಣ ಏನೆಂದರೆ ಮುಂದಿನ ತಿಂಗಳು ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ. ಆದಾಯ ಬರುವಂತಾಗಲಿ ಎಂದು ಬಿಡಿಎ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟಿಸಲಾಯಿತು.

ಆದರೆ, ಸಿದ್ದರಾಮಯ್ಯ ಅವರು ಅದನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್ನವರಿಗೆ ಕಮಿಷನ್ ಹೊಡೆಯಲು ಆಗುತ್ತಿಲ್ಲ. ಬಿಬಿಎಂಪಿಗೆ 4 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. ಕಾರ್ಪೊರೇಷನ್ ಬಿಲ್ಡಿಂಗ್, ಯುಟಿಲಿಟಿ ಬಿಲ್ಡಿಂಗ್, ವಾರ್ಡ್ ಆಫೀಸ್ಗಳನ್ನು ಕೂಡ ಅಡ ಇಡಲು ಇವರು ನೀಲಿನಕ್ಷೆ ತಯಾರಿಸಿದ್ದಾರೆ.

ಬೆಲೆ ಏರಿಕೆ
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿ ಸಾರ್ವಜನಿಕರಿಗೆ ಬರೆ ಹಾಕಿದೆ. ಶನಿವಾರದಿಂದಲೇ (ಜೂನ್ 15) ಜಾರಿಗೆ ಬರುವಂತೆ ತೈಲಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ 3.03 ಮತ್ತು ಡೀಸೆಲ್ 3.01 ರೂಪಾಯಿ, ಲೀಟರ್ ಒಂದಕ್ಕೆ ಏರಿಕೆಯಾಗಿದೆ.

ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 2,600 - 2,800 ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆಯಿದೆ. ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವಾರ್ಷಿಕ 52,000 ಕೋಟಿ ರೂಪಾಯಿ ಹೊಂದಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಸರ್ಕಾರವಿದೆ. ತೈಲಬೆಲೆ ಏರಿಕೆಯನ್ನು ಬಿಜೆಪಿ ಮತ್ತು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಜೊತೆಗೆ, ಸಾರ್ವಜನಿಕ ವಲಯದಲ್ಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)