Vani Vilasa Sagara Dam: ವಾಣಿ ವಿಲಾಸ ಸಾಗರ ಜಲಾಶಯದ ಬಿಗ್‌ ಅಪ್ಡೇಟ್‌?-ಮಾಹಿತಿ ಇಲ್ಲಿದೆ

Arun Kumar
0

Vani Vilasa Sagara Dam: ಹಿರಿಯೂರು ತಾಲೂಕಿನ ಜವನಗೊಂಡನ ಹಳ್ಳಿ ಹೋಬಳಿಯ ಕೆರೆಗಳಿಗೆ ವಿವಿ ಸಾಗರದಿಂದ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೋಮವಾರ (ಜೂನ್ 10) ಜವನಗೊಂಡನಹಳ್ಳಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚಿಕೊಂಡು ಬಂದ್ಗೆ ಬೆಂಬಲ ಸೂಚಿಸಿದರು. ಪ್ರತಿಭಟನಾಕಾರರು ಜವನಗೊಂಡನಹಳ್ಳಿಯಲ್ಲಿ ಪತ್ರಿಭಟನಾ ಮೆರವಣಿಗೆ ನಡೆಸಿ, ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಬಂದ್ನ ನೇತೃತ್ವ ವಹಿಸಿದ್ದ ರೈತ ಸಂಘದ ತಾಲೂಕು ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿಸುವ ಯೋಜನೆಯನ್ನು ಸುಲಭವಾಗಿ ಮಾಡಬಹುದಿತ್ತು. ಆದರೆ ದುಡ್ಡು ಮಾಡುವ ನಿಟ್ಟಿನಲ್ಲಿ ಕಾಮಗಾರಿಯನ್ನು ದಿಕ್ಕು ತಪ್ಪಿಸಲಾಯಿತು. ಭೂ ಸ್ವಾಧೀನ ಪ್ರಕ್ರಿಯೆ ಸೇರಿದಂತೆ ವಿವಿಧ ಕಾರಣಗಳಿಂದ ಕಾಮಗಾರಿ
ವಿಳಂಬ ಆಗುತ್ತಲೇ ಇದೆ ಎಂದು ಆರೋಪಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ತಾಲೂಕಿನಲ್ಲಿ 543 ದಿನ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗುವ ವಿಷಯ ತಿಳಿದ ಆಗಿನ ನೀರಾವರಿ ಸಚಿವ ಬಸವರಾಜ್ ಬೊಮ್ಮಾಯಿ ಸ್ಥಳಕ್ಕೆ ಬಂದು ವಿವಿ ಸಾಗರ ಡ್ಯಾಂಗೆ ನೀರು ಹಂಚಿಕೆ ಮಾಡಲು ಭರವಸೆ ನೀಡಿದ್ದರು.

ನಮ್ಮ ತಾಲೂಕಿನಲ್ಲಿ ಡ್ಯಾಂ ಇದ್ದರೂ ಸಹ ತಾಲೂಕಿನ ಜನರಿಗೆ ನೀರು ಸಿಗದಿರುವುದು ದುರಂತದ ಸಂಗತಿಯಾಗಿದೆ. ಗಾಯಿತ್ರಿ ಜಲಾಶಯ ಸೇರಿದಂತೆ ಸುಮಾರು 15 ಕೆರೆಗಳಿಗೆ ನೀರು ಹರಿಸಿದರೆ ಈ ಭಾಗದ ರೈತರ ಬದುಕಾದರೂ ಹಸನಾಗುತ್ತದೆ. ಬೇಸಿಗೆ ಬಂದರೆ ಸಾಕು ನೀರಿನ ಹಾಹಾಕಾರ ತಾಲೂಕಿನಲ್ಲಿ ಮೊದಲು ತಟ್ಟುವುದೇ ಈ ಹೋಬಳಿಗೆ. ಆದ್ದರಿಂದ ಈ ಭಾಗದ ಕೆರೆಗಳಿಗೆ ವಿವಿ ಸಾಗರದ ನೀರು ಹರಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಮುಖಂಡ ಜೆಜಿ ಹಳ್ಳಿ ಮಂಜುನಾಥ್ ಮಾತನಾಡಿ, ನಮ್ಮ ಹೋಬಳಿಯಲ್ಲಿ ಹೋರಾಟ ಇಲ್ಲದಿರುವುದರಿಂದ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದೇವೆ. ತಾಲೂಕು ಅಭಿವೃದ್ಧಿಯಾಗಲಿ ಎಂದು ನಾವು ಶ್ರಮ ಹಾಕಿ ಜನಪ್ರತಿನಿಧಿಗಳನ್ನು ಗೆಲ್ಲಿಸಿದರೆ ಅವರೇ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಶಿರಾ ಶಾಸಕ ಟಿಬಿ ಜಯಚಂದ್ರ ಅವರು ಕೃಷಿ ಮತ್ತು ನೀರಾವರಿಗೆ ಕೊಡುವ ಆದ್ಯತೆ ನಮ್ಮಲ್ಲೂ ಆಗಬೇಕಿದೆ. ಇತ್ತೀಚೆಗಷ್ಟೇ ಸಂಸದರಾಗಿ ಆಯ್ಕೆಯಾಗಿರುವ ಗೋವಿಂದ ಕಾರಜೋಳ ರವರು ಜವನಗೊಂಡನಹಳ್ಳಿ ಹೋಬಳಿ ಭಾಗದಲ್ಲಿ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಲು ಭರವಸೆ ನೀಡಿರುವುದು ಸದ್ಯದ ಆಶಾಧಾಯಕ ಬೆಳವಣಿಗೆ ಎಂದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಸಿ.ಬಿ.ಪಾಪಣ್ಣ ಮಾತನಾಡಿ, ಕಳೆದ ಆರು ತಿಂಗಳ ಹಿಂದೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಜಲಾಶಯದಿಂದ ಗಾಯಿತ್ರಿ ಜಲಾಶಯಕ್ಕೆ ನೀರು ಹರಿಸುವಂತೆ ಒತ್ತಾಯಿಸಲಾಗಿತ್ತು. 27 ಕಿಲೋ ಮೀಟರ್ ದೂರದಿಂದ 14 ಚೆಕ್ ಡ್ಯಾಂ ತುಂಬಿಕೊಂಡು ಗಾಯಿತ್ರಿ ಜಲಾಶಯಕ್ಕೆ ನೀರು ಹರಿಸಲಾಯಿತು.

 ಹಿರಿಯೂರು ತಾಲೂಕಿನ ಜವನಗೊಂಡನ ಹಳ್ಳಿ ಹೋಬಳಿಯ ಕೆರೆಗಳಿಗೆ ವಿವಿ ಸಾಗರದಿಂದ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೋಮವಾರ (ಜೂನ್ 10) ಜವನಗೊಂಡನಹಳ್ಳಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚಿಕೊಂಡು ಬಂದ್ಗೆ ಬೆಂಬಲ ಸೂಚಿಸಿದರು. ಪ್ರತಿಭಟನಾಕಾರರು ಜವನಗೊಂಡನಹಳ್ಳಿಯಲ್ಲಿ ಪತ್ರಿಭಟನಾ ಮೆರವಣಿಗೆ ನಡೆಸಿ, ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ಬಂದ್ನ ನೇತೃತ್ವ ವಹಿಸಿದ್ದ ರೈತ ಸಂಘದ ತಾಲೂಕು ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿಸುವ ಯೋಜನೆಯನ್ನು ಸುಲಭವಾಗಿ ಮಾಡಬಹುದಿತ್ತು. ಆದರೆ ದುಡ್ಡು ಮಾಡುವ ನಿಟ್ಟಿನಲ್ಲಿ ಕಾಮಗಾರಿಯನ್ನು ದಿಕ್ಕು ತಪ್ಪಿಸಲಾಯಿತು. ಭೂ ಸ್ವಾಧೀನ ಪ್ರಕ್ರಿಯೆ ಸೇರಿದಂತೆ ವಿವಿಧ ಕಾರಣಗಳಿಂದ ಕಾಮಗಾರಿ
ವಿಳಂಬ ಆಗುತ್ತಲೇ ಇದೆ ಎಂದು ಆರೋಪಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ತಾಲೂಕಿನಲ್ಲಿ 543 ದಿನ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗುವ ವಿಷಯ ತಿಳಿದ ಆಗಿನ ನೀರಾವರಿ ಸಚಿವ ಬಸವರಾಜ್ ಬೊಮ್ಮಾಯಿ ಸ್ಥಳಕ್ಕೆ ಬಂದು ವಿವಿ ಸಾಗರ ಡ್ಯಾಂಗೆ ನೀರು ಹಂಚಿಕೆ ಮಾಡಲು ಭರವಸೆ ನೀಡಿದ್ದರು.

ನಮ್ಮ ತಾಲೂಕಿನಲ್ಲಿ ಡ್ಯಾಂ ಇದ್ದರೂ ಸಹ ತಾಲೂಕಿನ ಜನರಿಗೆ ನೀರು ಸಿಗದಿರುವುದು ದುರಂತದ ಸಂಗತಿಯಾಗಿದೆ. ಗಾಯಿತ್ರಿ ಜಲಾಶಯ ಸೇರಿದಂತೆ ಸುಮಾರು 15 ಕೆರೆಗಳಿಗೆ ನೀರು ಹರಿಸಿದರೆ ಈ ಭಾಗದ ರೈತರ ಬದುಕಾದರೂ ಹಸನಾಗುತ್ತದೆ. ಬೇಸಿಗೆ ಬಂದರೆ ಸಾಕು ನೀರಿನ ಹಾಹಾಕಾರ ತಾಲೂಕಿನಲ್ಲಿ ಮೊದಲು ತಟ್ಟುವುದೇ ಈ ಹೋಬಳಿಗೆ. ಆದ್ದರಿಂದ ಈ ಭಾಗದ ಕೆರೆಗಳಿಗೆ ವಿವಿ ಸಾಗರದ ನೀರು ಹರಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಮುಖಂಡ ಜೆಜಿ ಹಳ್ಳಿ ಮಂಜುನಾಥ್ ಮಾತನಾಡಿ, ನಮ್ಮ ಹೋಬಳಿಯಲ್ಲಿ ಹೋರಾಟ ಇಲ್ಲದಿರುವುದರಿಂದ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದೇವೆ. ತಾಲೂಕು ಅಭಿವೃದ್ಧಿಯಾಗಲಿ ಎಂದು ನಾವು ಶ್ರಮ ಹಾಕಿ ಜನಪ್ರತಿನಿಧಿಗಳನ್ನು ಗೆಲ್ಲಿಸಿದರೆ ಅವರೇ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಶಿರಾ ಶಾಸಕ ಟಿಬಿ ಜಯಚಂದ್ರ ಅವರು ಕೃಷಿ ಮತ್ತು ನೀರಾವರಿಗೆ ಕೊಡುವ ಆದ್ಯತೆ ನಮ್ಮಲ್ಲೂ ಆಗಬೇಕಿದೆ. ಇತ್ತೀಚೆಗಷ್ಟೇ ಸಂಸದರಾಗಿ ಆಯ್ಕೆಯಾಗಿರುವ ಗೋವಿಂದ ಕಾರಜೋಳ ರವರು ಜವನಗೊಂಡನಹಳ್ಳಿ ಹೋಬಳಿ ಭಾಗದಲ್ಲಿ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಲು ಭರವಸೆ ನೀಡಿರುವುದು ಸದ್ಯದ ಆಶಾಧಾಯಕ ಬೆಳವಣಿಗೆ ಎಂದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಸಿ.ಬಿ.ಪಾಪಣ್ಣ ಮಾತನಾಡಿ, ಕಳೆದ ಆರು ತಿಂಗಳ ಹಿಂದೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಜಲಾಶಯದಿಂದ ಗಾಯಿತ್ರಿ ಜಲಾಶಯಕ್ಕೆ ನೀರು ಹರಿಸುವಂತೆ ಒತ್ತಾಯಿಸಲಾಗಿತ್ತು. 27 ಕಿಲೋ ಮೀಟರ್ ದೂರದಿಂದ 14 ಚೆಕ್ ಡ್ಯಾಂ ತುಂಬಿಕೊಂಡು ಗಾಯಿತ್ರಿ ಜಲಾಶಯಕ್ಕೆ ನೀರು ಹರಿಸಲಾಯಿತು.

ಮೊಳಕಾಲ್ಮೂರು, ಚಳ್ಳಕೆರೆ, ಆಂಧ್ರಪ್ರದೇಶದವರೆಗೂ ವಿವಿ ಸಾಗರದ ನೀರು ಹರಿಸುತ್ತಾರೆ. ಆದರೆ ಇಲ್ಲಿನವರಿಗೆ ನೀರು ಸಿಗುತ್ತಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಿದೆ. ಮಾಜಿ ಸಂಸದ ಕೋದಂಡರಾಮಯ್ಯನವರು ನೀರಿನ ಹೋರಾಟಕ್ಕೆ ಧುಮುಕಿದ ಪರಿಣಾಮವಾಗಿ ಇಂದು ಭದ್ರಾ ಮೇಲ್ದಂಡೆ ಯೋಜನೆಯಿಂದ ವಿವಿ ಸಾಗರ ಡ್ಯಾಂಗೆ ನೀರು ಬರಲು ಸಾಧ್ಯವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ವವರಿಗೆ ಈ ಭಾಗಕ್ಕೆ ನೀರು ತರುವುದು ದೊಡ್ಡ ಸವಾಲು ಅಲ್ಲ. ಜವನಗೊಂಡನಹಳ್ಳಿ ಹೋಬಳಿಗೆ ನೀರು ಕೊಡಲಾಗುತ್ತದೆ ಎಂದು ಕಾಮಗಾರಿ ಮಾಡಲಾಗುತ್ತಿದೆ. ನೀರೇ ಇಲ್ಲದಿರುವುದರಿಂದ ಕಾಮಗಾರಿ ಯಾಕೆ ಆರಂಭಿಸಿದ್ದಾರೆ ಎಂದು ತಿಳಿಯುತ್ತಿಲ್ಲ. ಗಾಯಿತ್ರಿ ಜಲಾಶಯಕ್ಕೆ ಮೊದಲು ನೀರಿನ ಅಲೋಕೆಷನ್ ಮಾಡಿಸಬೇಕು ಎಂದು ಆಗ್ರಹಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)