Gautam Gambhir: ಟೀಮ್ ಇಂಡಿಯಾದ ಹೆಡ್‌ ಕೋಚ್ ಆಗಿ ಗೌತಮ್‌ ಗಂಭೀರ್‌ ಆಯ್ಕೆ: ಜಯ್ ಶಾ

Arun Kumar
0

ಕನ್ನಡಿಗ ರಾಹುಲ್ ದ್ರಾವಿಡ್ ಅವರಿಂದ ತೆರವಾದ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚಿಗೆ ಅಮೆರಿಕ-ವೆಸ್ಟ್ ಇಂಡೀಸ್ ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರ ಅವಧಿ ಮುಗಿದಿದ್ದು, ಗೌತಮ್ ಟೀಮ್ ಇಂಡಿಯಾದ ಗುರುವಿನ ಸ್ಥಾನವನ್ನು ತುಂಬಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಾಮಾಜಿಕ ತಾಣದಲ್ಲಿ ತಿಳಿಸಿದ್ದಾರೆ.

ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್, ಟಿ20 ವಿಶ್ವಕಪ್ 2024 ಸೆಮಿಫೈನಲ್, 2023ರ ಏಕದಿನ ವಿಶ್ವಕಪ್ ಫೈನಲ್ ತಲುಪಿದ ಸಾಧನೆ ಮಾಡಿದೆ. ದ್ರಾವಿಡ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ 2007ರ ಬಳಿಕ, ಎರಡನೇ ಬಾರಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಚಾಂಪಿಯನ್ ತಂಡದ ಕೋಚ್ ಆಗಿ ದ್ರಾವಿಡ್ ನಿರ್ಗಮಿಸಿದ್ದಾರೆ. ಇವರ ಸ್ಥಾನವನ್ನು ಟೀಮ್ ಇಂಡಿಯಾ ಮಾಜಿ ಓಪನರ್ ಗೌತಮ್ ಗಂಭೀರ್ ತುಂಬಲಿದ್ದಾರೆ.

ಗೌತಮ್ ಗಂಭೀರ್ ಐಪಿಎಲ್ ನಲ್ಲಿ ಸೊಗಸಾದ ಕೌಶಲ್ಯಗಳನ್ನು ಮೆರೆದಿದ್ದರು. ಅಲ್ಲದೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ ಪ್ರಶಸ್ತಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಲೀಗ್ ಚಾಂಪಿಯನ್ ಕೋಚ್, ಟೀಮ್ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ.

ಗಂಭೀರ್ ಮೂರು ಸ್ವರೂಪಕ್ಕೂ ಗುರು
ಗಂಭೀರ್ ಅವರು ಎಲ್ಲಾ ಮೂರು ಸ್ವರೂಪಗಳಲ್ಲಿ ಟೀಮ್ ಇಂಡಿಯಾದ ಕೋಚ್ ಆಗಿ ನೇಮಿಸಲಾಗಿದೆ. ಇದೇ ವೇಳೆ ಪ್ರತ್ಯೇಕ ಕೋಚ್ಗಳನ್ನು ನೇಮಿಸುವುದಿಲ್ಲ ಎಂದು ಜಯ್ ಶಾ ಈಗಾಗಲೇ ಹೇಳಿದ್ದಾರೆ. ಗಂಭೀರ್ ಅವರ ಅಧಿಕಾರಾವಧಿ 3.5 ವರ್ಷಗಳ ಕಾಲ ಇರಲಿದೆ. ರಾಹುಲ್ ದ್ರಾವಿಡ್ ಅವರಿಂದ ತೆರವಾಗುವ ಸ್ಥಾನಕ್ಕೆ ಬಿಸಿಸಿಐ ಮೇನಲ್ಲಿ ಅರ್ಜಿಯನ್ನು ಆಹ್ವಾನಿಸಿತ್ತು. ಈ ಸ್ಥಾನಕ್ಕೆ ಹಲವು ಅರ್ಜಿಗಳು ಬಂದಿದ್ದವು. ಅವುಗಳಲ್ಲಿ ಭಾರತದ ಇಬ್ಬರನ್ನು ಸಂದರ್ಶನಕ್ಕೆ ಕರೆಯಲಾಗಿತ್ತು. ಇದರಲ್ಲಿ ಗೌತಮ್ ಗಂಭೀರ್ ಒಬ್ಬರಾದರೆ, ಇನ್ನೊಬ್ಬರು ಭಾರತ ಮಹಿಳಾ ತಂಡದ ಮಾಜಿ ಕೋಚ್ ಡಬ್ಲ್ಯುವಿ ರಾಮನ್.

ಗಂಭೀರ್ ಆದರ್ಶ ವ್ಯಕ್ತಿ
ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗಂಭೀರ್ ಹೆಸರನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಅವರನ್ನು ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ ಮತ್ತು ಗೌತಮ್ ಈ ಬದಲಾಗುತ್ತಿರುವ ಸನ್ನಿವೇಶವನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಕಷ್ಟಗಳನ್ನು ಸಹಿಸಿಕೊಂಡು ವಿವಿಧ ಪಾತ್ರಗಳಲ್ಲಿ ಮಿಂಚಿರುವ ಗೌತಮ್ ಅವರು ಭಾರತೀಯ ಕ್ರಿಕೆಟ್ನ್ನು ಮುನ್ನಡೆಸಲು ಆದರ್ಶ ವ್ಯಕ್ತಿ ಎಂಬ ವಿಶ್ವಾಸವಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.
Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)