ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿ ಓವರ್ ಟೇಕ್ ಮಾಡಲು ಹೋಗಿ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು

Arun Kumar
0

ಚಿತ್ರದುರ್ಗ, ಆಗಸ್ಟ್, 29: ಲಾರಿ ಓವರ್ ಟೇಕ್ ಮಾಡಲು ಹೋಗಿ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ಹಾಗಾದರೆ ಈ ಘಟನೆ ನಡೆದಿದ್ದು ಯಾವಾಗ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಚಿತ್ರದುರ್ಗ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ತಡರಾತ್ರಿ 1 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಜಗಳೂರು ಮೂಲದ ಫಯಾಜ್ ಹಾಗೂ ಆಶ್ರಫ್ ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಕಾರಿನಲ್ಲಿದ್ದ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಾಲಿಸಲಾಗಿದೆ.

ಜಗಳೂರು ಮೂಲದ ಮೂವರು ಚಿತ್ರದುರ್ಗದಿಂದ ಜಗಳೂರಿಗೆ ಕಡೆಗೆ ಹೋಗುವಾಗ ಚಿಕ್ಕಗೊಂಡನಹಳ್ಳಿ ಬಳಿ ಮುಂದೆ ಚಲಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಲಾರಿಯ ಹಿಂಬದಿಗೆ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ. ಈ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ವಿಷಯ ತಿಳಿದ ತಕ್ಷಣ ತುರುವನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಮೂವರು ಸ್ಥಳದಲ್ಲಿ ಸಾವು: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

ಜಿಲ್ಲೆಯ ಚಿಕ್ಕಬೆನ್ನೂರು ಬಳಿ ಈ ಘಟನೆ ನಡೆದಿದ್ದು, ಅಪಘಾತ ರಭಸಕ್ಕೆ ಮೂವರು ಸ್ಥಳದಲ್ಲಿ ಅಸುನಿಗಿದ್ದಾರೆ ಎಂದು ತಿಳಿದುಬಂದಿತ್ತು. ಇನ್ನು ಪ್ರಜ್ವಲ್ ರೆಡ್ಡಿ (30 ವರ್ಷ), ಹರ್ಷಿತಾ (28 ವರ್ಷ) ಮತ್ತು ಮಗು ಸೋಹನ್ (2 ವರ್ಷ) ಮೃತ ದುರ್ದೈವಿಗಳಾಗಿದ್ದಾರೆ. ಗಾಯಗೊಂಡವರನ್ನು ಶಿಲ್ಪ, ಸ್ವರ್ಣ ಜಾರ್ಜ್, ಮಧುಮಿತ, ವಿಜಯ್ ರೆಡ್ಡಿ, ಕೃಷ್ಣ, ಎಂದು ಗುರುತಿಸಲಾಗಿದೆ.

ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)