ಹುಡುಗಿಯರ ಹಾಸ್ಟೆಲ್‌ನಲ್ಲಿ ಸೀಕ್ರೆಟ್‌ ಕ್ಯಾಮೆರಾ ಇಟ್ಟು ನೂರಾರು ವಿಡಿಯೋ ರೆಕಾರ್ಡ್‌; ಎಲ್ಲಿ?

Arun Kumar
0

ಒಳ್ಳೆಯ ಶಿಕ್ಷಣ ಮುಗಿಸಿ, ಉತ್ತಮ ಬದುಕು ಕಟ್ಟಿಕೊಳ್ಳಲಿ ಎಂದು ಮಕ್ಕಳನ್ನು ಒಳ್ಳೆಯ ಕಾಲೇಜುಗಳಿಗೆ ಸೇರಿಸಿದ್ದರೆ, ಅಲ್ಲೊಬ್ಬ ವಿದ್ಯಾರ್ಥಿ ಮಾಡಬಾರದ ಕೆಲಸಗಳನ್ನು ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ. ಅಷ್ಟಕ್ಕೂ ಈತ ಮಾಡಿರೋ ಘನಂದಾರಿ ಕೆಲಸ ಏನು ಅಂತ ನಿಮಗೆ ಗೊತ್ತಾದ್ರೆ, ನೇರವಾಗಿ ಅವನಿಗೆ ಸರಿಯಾಗಿ ಬಾರಿಸಬೇಕು ಅನ್ನೋವಷ್ಟು ಕೋಪ ಬರೋದಂತೂ ಗ್ಯಾರಂಟಿ.

ವಿದ್ಯಾರ್ಥಿಯೊಬ್ಬ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್ರೂಮ್ಗಳಲ್ಲಿ ಸೀಕ್ರೇಟ್ ಕ್ಯಾಮೆರಾ ಅಳವಡಿಸಿದ್ದಾನೆ. ಬರೋಬ್ಬರಿ 300ಕ್ಕೂ ಹೆಚ್ಚು ನಗ್ನ ವಿಡಿಯೋಗಳನ್ನು ಸೆರೆಹಿಡಿದು ಅವುಗಳನ್ನು ಮಾರಾಟ ಮಾಡುತ್ತಿದ್ದ ಎಂದು ವರದಿಯಾಗಿದೆ. ಈ ಘಟನೆ ನಡೆದಿರುವುದು ಆಂಧ್ರಪ್ರದೇಶದ ಗುಡಿವಾಡದ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಎಂದು ಹೇಳಲಾಗಿದೆ.

ದೊಡ್ಡ ಕ್ಯಾಂಪಸ್ ಆಗಿರುವ ಕಾರಣ ಯುವತಿಯರ ಹಾಸ್ಟೆಲ್ನಲ್ಲಿ ಕ್ಯಾಮೆರಾ ಇಟ್ಟು ರಹಸ್ಯವಾಗಿ ಅವರ ವಿಡಿಯೋಗಳನ್ನು ಸೆರೆಹಿಡಿದಿದ್ದಾನೆ. ಈ ಕೃತ್ಯ ಬಹಳ ದಿನಗಳಿಂದಲೂ ನಡೆದಿದ್ದು, ನಿನ್ನೆ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಈತ 300ಕ್ಕೂ ಹೆಚ್ಚು ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದು, ಅವುಗಳನ್ನು ಬಾಯ್ಸ್ ಹಾಸ್ಟೆಲ್ನ ಹುಡುಗರಿಗೆ ಮಾರಾಟ ಮಾಡುತ್ತಿದ್ದ ಎಂದೂ ಆರೋಪಿಸಲಾಗಿದೆ.

ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದ ವಿಡಿಯೋಗಳು ಕೂಡ ವಿದ್ಯಾರ್ಥಿಗಳ ಮೊಬೈಲ್ಗಳಲ್ಲಿ ಹರಿದಾಡಿದೆ ಎನ್ನಲಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಕಾಲೇಜಿನ ಯುವತಿಯರೆಲ್ಲ ಆಂತಕಕ್ಕೊಳಗಾಗಿದ್ದಾರೆ. ಈ ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗಿ, ನಿನ್ನೆ ರಾತ್ರಿ ಪ್ರತಿಭಟನೆ ನಡೆಸಿ ನಮಗೆ ನ್ಯಾಯ ಬೇಕು ಎಂದು ಕೂಗಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸದ್ದು ಮಾಡುತ್ತಿವೆ.

ಮತ್ತೊಂದೆಡೆ, ಯುವಕನೊಬ್ಬ ಯುವತಿಯರ ಹಾಸ್ಟೆಲ್ ಒಳಗೆ ಹೋಗಿ ಸೀಕ್ರೇಟ್ ಕ್ಯಾಮೆರಾ ಇಡಲು ಹೇಗೆ ಸಾಧ್ಯ? ಎಂಬ ಪ್ರಶ್ನೆಯೂ ಉದ್ಭವಿಸಿದೆ. ಅಲ್ಲದೆ ಈ ಕೃತ್ಯಕ್ಕೆ ಯಾರಾದರೂ ಆತನಿಗೆ ಸಹಕರಿಸಿರಬಹುದು ಎಂದೂ ಹೇಳಲಾಗುತ್ತಿದೆ. ಘಟನೆ ಸಂಬಂಧ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಆತನ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಸದ್ಯ ಈ ವಿಚಾರವಂತೂ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗುತ್ತಿದೆ.

ಈ ವಿಚಾರವಾಗಿ ಪೋಷಕರು ಕೂಡ ಆತಂಕಕ್ಕೆ ಒಳಗಾಗಿದ್ದು, ಇಂತಹ ಕೃತ್ಯಗಳು ನಡೆದರೆ ಹೆಣ್ಣುಮಕ್ಕಳನ್ನು ಕಾಲೇಜುಗಳಿಗೆ ಕಳಿಸುವುದು ಹೇಗೆ? ಎಂದು ಪ್ರಶ್ನೆ ಮುಂದಿಟ್ಟಿದ್ದಾರೆ. ಹೆಣ್ಣುಮಕ್ಕಳ ಮಾನಕ್ಕೆ ರಕ್ಷಣೆ ಒದಗಿಸದ ಕಾಲೇಜುಗಳು ಇದ್ದೂ ಏನು ಪ್ರಯೋಜನ? ಎಂದು ಸಂಕಟ ಹೊರಹಾಕುತ್ತಿದ್ದಾರೆ. ಅಲ್ಲದೆ ಕಾಲೇಜುಗಳಲ್ಲಿ ಆಡಳಿತ ಮಂಡಳಿಗಳು ಸಕ್ರಿಯವಾಗಿಲ್ಲವೇ ಎಂಬ ಅನುಮಾನಗಳೂ ವ್ಯಕ್ತವಾಗುತ್ತಿವೆ.

ಇನ್ನು ಈ ಕಾಲೇಜಿನ ವಿದ್ಯಾರ್ಥಿಗಳು ಈ ಬಗ್ಗೆ ಆಡಳಿತ ಮಂಡಳಿಗೆ ದೂರು ನೀಡಿದ್ದರೂ ಅವರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲೂ ಈ ವಿಚಾರವಾಗಿ ಚರ್ಚೆಗಳು ಜೋರಾಗಿದ್ದು, ಈ ಘಟನೆ ಸಂಬಂಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲೇಬೇಕು ಎಂದು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಆರೋಪಿಗಳು ಎನ್ನಲಾದ ವಿದ್ಯಾರ್ಥಿಯ ಫೋಟೋ, ವಿಡಿಯೋಗಳನ್ನು ಕೂಡ ಕೆಲವರು ಶೇರ್ ಮಾಡಿಕೊಂಡಿದ್ದು, ಈ ಪೈಕಿ ಒಬ್ಬಳು ವಿದ್ಯಾರ್ಥಿನಿಯ ಫೋಟೋ ಕೂಡ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)