ಮೈಸೂರು ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟ: ಇಲ್ಲಿದೆ ಸಂಪೂರ್ಣ ವಿವರ

Arun Kumar
1

ಮೈಸೂರು, ಸೆಪ್ಟೆಂಬರ್ 23: ನಾಡ ಹಬ್ಬ ಮೈಸೂರು ದಸರಾ 2024ಕ್ಕೆ ದಿನ ಗಣನೆ ಆರಂಭವಾಗಿದೆ. ದಸರಾಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ದಸರಾಗೆ ಸಂಬಂಧಿಸಿದ ಕಾರ್ಯಕ್ರಮಗಳು ಕೂಡ ಭರದಿಂದ ಸಾಗುತ್ತಿದೆ. ದಸರಾ ಅಂಗವಾಗಿ ನಡೆಯುವ ಮೈಸೂರು ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟವನ್ನು ಸೆಪ್ಟೆಂಬರ್ 26 ಮತ್ತು ಸೆಪ್ಟೆಂಬರ್ 27ರಂದು ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಮೈಸೂರು ಜಿಲ್ಲೆಯ 9 ತಾಲೂಕುಗಳಲ್ಲಿ ನಡೆದ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ, ಜಿಲ್ಲಾ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟವನ್ನು ಸೆಪ್ಟೆಂಬರ್ 26 ಮತ್ತು ಸೆಪ್ಟೆಂಬರ್ 27ರಂದು ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿರುವ ಕ್ರೀಡೆಗಳು
ಪುರುಷರಿಗೆ ಅಥ್ಲೆಟಿಕ್ನಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500ಮೀ, 5000 ಮೀ. ಓಟ, 1000ಮೀ ಓಟ, ಉದ್ದ ಜಿಗಿದ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4×100 ಮೀ. ರಿಲೇ, 4×400 ಮೀ.ರಿಲೇ., ಮಹಿಳೆಯರಿಗೆ ಅಥ್ಲೆಟಿಕ್ಸ್ನಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500ಮೀ, 3000 ಮೀ.ಓಟ, ಉದ್ದಜಿಗಿದ, ಎತ್ತರಜಿಗಿತ, ಗುಂಡುಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ, 4×100 ಮೀ. ರಿಲೇ, 4×100 ಮೀ.ರಿಲೇ, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ ಬಾಸ್ಕೆಟ್ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗವನ್ನು ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಆಯ್ಕೆಮಾಡಲಾಗುತ್ತಿರುವ ಕ್ರೀಡೆಗಳ ವಿವರ
ಟೆನ್ನಿಸ್, ನೆಟ್ಬಾಲ್, ಪುರುಷರು ಮತ್ತು ಮಹಿಳೆಯರಿಗೆ ಈಜು 100, 200, 400, ಮೀ. ಫ್ರೀ ಸ್ಟೈಲ್, 100, 200 ಮೀ. ಬ್ಯಾಕ್ ಸ್ಟ್ರೋಕ್, 100, 200ಮೀ. ಬ್ರೆಸ್ಟ್ ಸ್ಟ್ರೋಕ್, 100 ಮೀ. ಬಟರ್ ಫ್ಲೈ, 200 ಮೀ. ಇಂಡಿವಿಜಯಲ್ ಮಿಡ್ಲೆ, 4×100 ಮೀ. ಫ್ರೀ ಸ್ಟೈಲ್ ರಿಲೇ ಅನ್ನು ಏರ್ಪಡಿಸಲಾಗಿದೆ.

ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುವ ಕ್ರೀಡಾಪಟುಗಳು ಸೆಪ್ಟೆಂಬರ್ 26 ರಂದು ಬೆಳಗ್ಗೆ 9 ಗಂಟೆಗೆ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಕ್ರೀಡಾಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಜಿಲ್ಲಾ ಮಟ್ಟದ ದಸರಾ ಕ್ರೀಡಾ ಸಿ.ಎಂ.ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಾತ್ರ ಪ್ರಮಾಣ ಭತ್ಯೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಅಥವಾ ದೂ.ಸಂ.0821-2564179 ಸಂಪರ್ಕಿಸಬಹುದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

1ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ