Jammu and kashmir 2nd phase Assembly election 2024 LIVE: ಶಾಂತಿಯುತವಾಗಿ ಮುಗಿದ ಎರಡನೇ ಹಂತದ ಚುನಾವಣೆ; 56% ಮತದಾನ

Arun Kumar
0

ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ 18ರಂದು ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿದೆ. ಇಂದು ಎರಡನೇ ಹಂತದ ಚುನಾವಣೆ ಕೂಡ ಶಾಂತಿಯುತವಾಗಿ ಮುಕ್ತಾಯವಾಗಿದೆ, 56% ಮತದಾನವಾಗಿದೆ. 26 ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಇದೀಗ ಕೊನೆಯ ಹಂತದ ಚುನಾವಣೆಯತ್ತ ಪಕ್ಷಗಳು ಗಮನ ಹರಿಸಿವೆ. ಅಕ್ಟೋಬರ್ 01ರಂದು ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ ಬದಲು ಅಕ್ಟೋಬರ್ 8 ರಂದು ಪ್ರಕಟಿಸಲಾಗುವುದು. 10 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಎರಡನೇ ಹಂತದ ಚುನಾವಣೆಗೆ ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ 2ನೇ ಹಂತದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. 56% ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಜಮ್ಮು ಭಾಗದಲ್ಲಿ ಶ್ರೀ ಮಾತಾ ವೈಷ್ಣೋ ದೇವಿ ಕ್ಷೇತ್ರದಲ್ಲಿ 75.29% ರಷ್ಟು ಮತದಾನವಾಗಿದೆ. ಕಾಶ್ಮೀರ ಭಾಗದಲ್ಲಿ ಖಾನ್ಸಾಹಿಬ್ ಕ್ಷೇತ್ರದಲ್ಲಿ 67.70% ರಷ್ಟು ಮತದಾನ ನಡೆದಿದೆ.

ಜಮ್ಮು ಕಾಶ್ಮೀರದಲ್ಲಿ ಶೇಕಡಾ 54 ರಷ್ಟು ಮತದಾನ

ಜಮ್ಮು ಮತ್ತು ಕಾಶ್ಮೀರವು ಇಂದು ಎರಡನೇ ಹಂತ ಮತದಾನಕ್ಕೆ ಸಾಕ್ಷಿಯಾಗಿದೆ. ಸಂಜೆ 5 ಗಂಟೆ ಹೊತ್ತಿಗೆ ಶೇಕಡಾ 54% ಮತದಾನ ಆಗಿದೆ. ಸದ್ಯ ಆರು ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರ ಮತದಾನ ನಡೆದಿದೆ. ಕಳೆದ ಭಾರಿ ಮೊದಲ ಹಂತದ ಮತದಾನದಲ್ಲಿ 64ರಷ್ಟು ಮತದಾನ ನಡೆದಿತ್ತು. ಮೂರನೇ ಹಂತದ ಮತದಾನವು ಬಾಕಿ ಇದೆ.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯನ್ನು ವಿದೇಶಿ ರಾಜತಾಂತ್ರಿಕರ ತಂಡ ಪರಿಶೀಲನೆ ಮಾಡಿರುವುದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, 15 ಜನರ ತಂಡ ಪರಿಶೀಲನೆ ಮಾಡಿದೆ. ಈ ನಿಯೋಗವು ರಾಜ್ಯದ ಮತದಾರರಿಂದ ಅಭಿಪ್ರಾಯ ಸಂಗ್ರಹಿಸಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)