Male Mahadeshwara Temple: ಕೇವಲ 28 ದಿನಗಳಲ್ಲಿ ಮಲೆ ಮಾದಪ್ಪನ ಹುಂಡಿಗೆ ಬಿತ್ತು ₹1,64,22,932 ಹಣ

Arun Kumar
0

ಚಾಮರಾಜನಗರ, ಸೆಪ್ಟೆಂಬರ್, 26: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ (ಸೆಪ್ಟೆಂಬರ್ 26) ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. ಹಾಗಾದರೆ ಎಷ್ಟು ಹಣ ಸಂಗ್ರಹವಾಗಿದೆ ಎನ್ನುವ ಅಂಕಿಅಂಶಗಳ ಸಮೇತ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಇಂದು ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೇವಲ 28 ದಿನಗಳ ಅವಧಿಯಲ್ಲಿ 1.64 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 5 ಗಂಟೆಯವರೆಗೂ ನಡೆಯಿತು.

ಹುಂಡಿ ಸಂಗ್ರಹದ ಮೂಲಗಳು ಯಾವುವು?: ಶ್ರಾವಣ ಮಾಸದ ಕುಂಬೋತ್ಸವ, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಹಿನ್ನೆಲೆ ಹರಕೆಯ ರೂಪದಲ್ಲಿ 1,64,22,932 ರೂಪಾಯಿ ನಗದು, 21 ಗ್ರಾಂ ಚಿನ್ನ ಹಾಗೂ 2.100 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಅಷ್ಟೇ ಅಲ್ಲದೆ ಹುಂಡಿಯಿಂದ 2,89,713 ನೇಪಾಳದ 5 ನೋಟು ಸೇರಿದಂತೆ ಚಲಾವಣೆಯಲ್ಲಿಲ್ಲದ 2,000 ರೂಪಾಯಿ ಮುಖಬೆಲೆಯ 12 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)