Weather Report: ಈ ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆ ನಿರೀಕ್ಷೆ

Arun Kumar
0

ರಾಜ್ಯದಲ್ಲಿ ಈ ಬಾರಿ ಮುಂಗಾರು ಸಮೃದ್ಧವಾಗಿದೆ. ಇನ್ನೂ ಹಲವು ಜಿಲ್ಲೆಗಳಲ್ಲಿ ನಿರೀಕ್ಷೆಯಂತೆ ಮಳೆಯಾಗದೆ ಇದ್ದರೂ, ಒಟ್ಟಾರೆ ರಾಜ್ಯದಲ್ಲಿ ವಾಡಿಕೆಗೆ ತಕ್ಕಂತೆ, ಕೆಲವು ಭಾಗಗಳಲ್ಲಿ ವಾಡಿಕೆಗಿಂತ ಅಧಿಕವಾಗಿ ಕೂಡ ಮಳೆಯಾಗಿದೆ. ಇದೀಗ ಕೆಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರು, ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಭಾನುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಚದುರಿದಂತೆ ಉತ್ತಮ ಮಳೆಯಾಗುವ ನಿರಿಕ್ಷೆ ಮಾಡಲಾಗಿದೆ.

ಭಾನುವಾರ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದು, ಕೆಲವು ಭಾಗಗಳಿಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮುನ್ಸೂಚನೆ ಇದ್ದು, ಕೆಲವು ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆಯಾಗಲಿದೆ ಎಂದು ಹೇಳಿದೆ.

ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಇಂದು ಚದುರಿದಂತೆ ಸಾಧಾರಣ ಅಥವಾ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಬೆಂಗಳೂರು, ತುಮಕೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)