Vani Vilasa Sagara Dam: ಭಾರೀ ಮಳೆ ಮುಂದುವರೆದ ಹಿನ್ನೆಲೆ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವು ಮುಂದುವರೆದಿದೆ. ಹಾಗಾದರೆ ಇಂದು (ಅಕ್ಟೋಬರ್ 16) ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇಂದು (ಅಕ್ಟೋಬರ್ 16)ಬುಧವಾರದ ವರದಿಯಲ್ಲಿ ಡ್ಯಾಂಗೆ 2,426 ಕ್ಯೂಸೆಕ್ ಒಳಹರಿವು ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 122.85 ಅಡಿ ತಲುಪಿದೆ.
ಜಲಾಶಯದ ಮೇಲ್ಭಾಗದಲ್ಲಿ ಮಳೆ ಆಗುತ್ತಿರುವದರಿಂದ ಒಳಹರಿವು ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ವಾಣಿ ವಿಲಾಸ ಸಾಗರ ಡ್ಯಾಂ ಒಟ್ಟು 135 ಅಡಿ ಎತ್ತರವಿದ್ದು, 130 ಅಡಿಗೆ ಡ್ಯಾಂ ಕೋಡಿ ಬೀಳುತ್ತದೆ. 30 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಜಲಾಶಯ ಇದಾಗಿದೆ.
ಹಿರಿಯೂರು ತಾಲ್ಲೂಕಿನ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ 1907ರಲ್ಲಿ ವೇದಾವತಿ ನದಿಗೆ ಅಡ್ಡಲಾಗಿ ವಿವಿ ಸಾಗರ ಡ್ಯಾಂ ನಿರ್ಮಾಣ ಮಾಡಲಾಗಿದೆ. 2022ರಲ್ಲಿ ಜಲಾಶಯ ಭರ್ತಿಯಾಗಿ ಎರಡನೇ ಬಾರಿಗೆ ಡ್ಯಾಂ ಕೋಡಿ ಬಿದ್ದಿತ್ತು. ಇದೀಗ ಇನ್ನು ಕೇವಲ 7 ಅಡಿ ನೀರು ಹರಿದು ಬಂದರೆ ಜಲಾಶಯ ಮೂರನೇ ಬಾರಿಗೆ ಕೋಡಿ ಬೀಳಲಿದೆ.
ಭಾರೀ ಮಳೆ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳ್ಳಂ ಬೆಳಗ್ಗೆಯೇ ಜಿಟಿ ಜಿಟಿ ಮಳೆ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮಂಗಳವಾರ (ಅಕ್ಟೋಬರ್ 15) ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 9.9 ಮಿಲಿ ಮೀಟರ್ ಮಳೆಯಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.2 ಮಿಲಿ ಮೀಟರ್, ಚಿತ್ರದುರ್ಗ ತಾಲ್ಲೂಕಿನಲ್ಲಿ 5.2, ಹಿರಿಯೂರು ತಾಲ್ಲೂಕು 10 ಮಿಲೊ ಮೀಟರ್, ಹೊಳಲ್ಕೆರೆ ತಾಲ್ಲೂಕು 9.3 ಮಿಲಿ ಮೀಟರ್, ಹೊಸದುರ್ಗ ತಾಲ್ಲೂಕಿನಲ್ಲಿ 20 ಮಿಲಿ ಮೀಟರ್ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 6.7 ಮಿಲಿ ಮೀಟರ್ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆಯಲ್ಲಿ 4.6 ಮಿ.ಮೀ, ನಾಯಕನಹಟ್ಟಿ 9.4 ಮಿ.ಮೀ, ಪರಶುರಾಂಪುರ 6 ಮಿ.ಮೀ, ತಳಕು 9 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗದಲ್ಲಿ 5.6 ಮಿ.ಮೀ, ಭರಮಸಾಗರ 5.5 ಮಿ.ಮೀ, ಹಿರೇಗುಂಟನೂರು 5.6 ಮಿ.ಮೀ, ತುರುವನೂರು 3.9 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರು 13 ಮಿ.ಮೀ, ಐಮಂಗಲ 8.9 ಮಿ.ಮೀ, ಧರ್ಮಪುರ 9 ಮಿ.ಮೀ, ಜವನಗೊಂಡನಹಳ್ಳಿ 10.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 12.4 ಮಿ.ಮೀ, ಬಿ.ದುರ್ಗ 7.4 ಮಿ.ಮೀ, ರಾಮಗಿರಿ 6.9 ಮಿ.ಮೀ, ತಾಳ್ಯ 10.5 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 7.6 ಮಿ.ಮೀ, ಮಾಡದಕೆರೆ 11.3 ಮಿ.ಮೀ, ಮತ್ತೋಡು 41.1 ಮಿ.ಮೀ, ಶ್ರೀರಾಂಪುರ 31.6 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 6.7 ಮಿ.ಮೀ ಹಾಗೂ ದೇವಸಮುದ್ರದಲ್ಲಿ 6.8 ಮಿ.ಮೀ ಮಳೆಯಾಗಿದೆ.
29 ಮನೆಗಳು ಭಾಗಶಃ ಹಾನಿ: ಈಗಾಗಲೇ ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 29 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ವರದಿಯಾಗಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.