ಬಿಬಿಎಂಪಿ 5 ಪಾಲಿಕೆಯಾಗಿ ವಿಂಗಡಣೆ: ಬಿಜೆಪಿ ಶಾಸಕರ ಸಭೆಯಲ್ಲಿ ಚರ್ಚೆಯಾಗಿದ್ದೇನು?

Arun Kumar
0
ಬೆಂಗಳೂರು, ಜುಲೈ 26: ಬೆಂಗಳೂರು ಮಹಾನಗರದ ಬಿಜೆಪಿಯ ಎಲ್ಲ ಹಿರಿಯ ಶಾಸಕರು ಕುಳಿತು ಈ ನಗರದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ. ರಾಜ್ಯ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇದ್ದರೂ ನಗರದ ಅಭಿವೃದ್ಧಿ ವಿಚಾರದಲ್ಲಿ ವೈಜ್ಞಾನಿಕವಾಗಿ ಆಲೋಚಿಸಿಲ್ಲ. ಭೂಗತ ಟನೆಲ್ ರಸ್ತೆ, ಬಿಬಿಎಂಪಿಯನ್ನು 5 ವಿಭಾಗವಾಗಿ ಮಾಡುವ ಅವೈಜ್ಞಾನಿಕ ತೀರ್ಮಾನವು ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಪೂರಕವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದರು.

ಬೆಂಗಳೂರು ಮಹಾನಗರವನ್ನು 5 ವಿಭಾಗವಾಗಿ ಮಾಡುವ ಮೂಲಕ ದೊಡ್ಡ ಅನ್ಯಾಯ ಮಾಡುತ್ತಿದ್ದಾರೆ. ಇದು ನಿಶ್ಚಿತವಾಗಿ ಅಭಿವೃದ್ಧಿಗೆ ಪೂರಕವಲ್ಲ ಎಂದು ಆಕ್ಷೇಪಿಸಿದರು. ಮುಂಬೈ ಮತ್ತಿತರ ಮಹಾನಗರಗಳಲ್ಲಿ ಇಂಥ ಪ್ರಯೋಗ ಮಾಡಿ ಅವೆಲ್ಲವೂ ವಿಫಲವಾಗಿವೆ ಎಂದು ಗಮನ ಸೆಳೆದರು. ಬಿಜೆಪಿ ಇದನ್ನು ಹಿಂದೆ ವಿರೋಧಿಸಿದ್ದು, ಇಂದು ಮತ್ತು ಮುಂದೆಯೂ ವಿರೋಧಿಸಲಿದೆ ಎಂದು ಹೇಳಿದರು.

ಭೂಗತ ಟನೆಲ್ ರಸ್ತೆಯ ಸಾಧಕ ಬಾಧಕವನ್ನು ಚರ್ಚೆ ಮಾಡದೆ, ಆತುರಾತುರವಾಗಿ ಟೆಂಡರ್ ಕರೆಯಲು ಹೊರಟಿದ್ದು ಖಂಡಿತ ಸರಿಯಲ್ಲ. ಬ್ಲ್ಯಾಕ್ ಲಿಸ್ಟ್ ಆದ ಕಂಪೆನಿಗಳನ್ನು ಸೇರಿಸಿಕೊಂಡು ಆತುರದಿಂದ ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಹೊರಟಿದ್ದು, ಇದರ ಹಿಂದೆ ಅಭಿವೃದ್ಧಿಯ ಚಿಂತನೆ ಇದೆಯೇ ಅಥವಾ ಬೇರೆ ಆಲೋಚನೆಗಳಿದೆಯೇ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಸಾವಿರಾರು ಮನೆಗಳಿಗೆ ಎನ್‍ಒಸಿ ಸಿಗದೆ ಗೃಹ ಪ್ರವೇಶ ಮಾಡಲು ಸಾಧ್ಯವಾಗುತ್ತಿಲ್ಲ. ಇದರ ಕುರಿತು ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಅªರಾಗಲೀ ಚಿಂತಿಸುತ್ತಿಲ್ಲ ಎಂದು ದೂರಿದರು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)